*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ* *ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ* *ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ*
*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ*
*ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ*
*ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ*
ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಪುಟ್ಟಣ್ಣರವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಕ ಸಚಿವರು ಎಸ್ ಮಧು ಬಂಗಾರಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಇದೇ ತಿಂಗಳ 20ನೇ ತಾರೀಖಿನೊಳಗೆ ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆಯಾಗುವುದು. ಪಿಯು ಆಡಳಿತ ನಿಯಂತ್ರಣವನ್ನು ಜಿ.ಪಂ. ಸಿಇಒಗಳಿಗೆ ವಹಿಸುವ ಪ್ರಸ್ತಾವನೆಯನ್ನು ಸದ್ಯಕ್ಕೆ ನಮ್ಮ ಸರ್ಕಾರ ಕೈಬಿಟ್ಟಿದೆ. ಈ ಬಗ್ಗೆ ಶಿಕ್ಷಕರು ಆತಂಕಪಡುವ ಅಗತ್ಯವಿಲ್ಲ.
ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಬಾಗಿಲು ಸದಾ ತೆರೆದಿದೆ. ಆದರೆ, ಬೇಡಿಕೆಗಳಿಗಾಗಿ ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ. ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.


