*ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು*

*ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು*

ಸಾಗರ ತಾಲೂಕು ಹೊಸಗುಂದ ವಾಸಿ ಹೆಚ್.ಎಸ್.ಜನಾರ್ಧನರವರಿಂದ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಭಾವಿ ಕೊರೆಸಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಎಂಬುವವರಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 40000/- ರೂ. ದಂಡ ವಿಧಿಸಿ ಅದೇಶಿಸಿದೆ ಎಂದು ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜುಲೈ 2017ರಲ್ಲಿ ಆಪಾದಿತ ಅಧಿಕಾರಿ ತಮ್ಮ ಕಚೇರಿಯಲ್ಲಿ ರೂ. 10,000/- ರೂ. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿರುತ್ತಾರೆ.

ಈ ಪ್ರಕರಣವನ್ನು ತನಿಖಾಧಿಕಾರಿ ಪೊಲೀಸ್ ಉಪಾಧೀಕ್ಷಕ ಎ. ಚಂದ್ರಪ್ಪ ತನಿಖೆ ಕೈಗೊಂಡು ಆಪಾದಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿರುತ್ತಾರೆ. ಈ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಏ.02,2016 ರಂದು ವಿಚಾರಣೆ ನಡೆಸಿ ಆರೋಪ ದೃಢಪಟ್ಟಿರುವುದು ಕಂಡುಬಂದಿದ್ದು, ಆಪಾದಿತರಿಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂ. 40,000/- ಗಳ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ.ಸುಂದರ್ ರಾಜ್ ವಾದ ಮಂಡಿಸಿರುತ್ತಾರೆ.