ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಇಂದು ಮದ್ಯಾಹ್ನ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಅನುಪಿನ ಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಹಾಗೂ ಚೋರಡಿಯ ಶ್ರೀ ರಾಮಕೃಷ್ಣ ಶಾಲೆಗಳಲ್ಲಿ ಪರೀಕ್ಷೆ ಬರೆದ ಎಲ್ಲಾ ಮಕ್ಕಳು ಡಿಸ್ಟಿಂಕ್ಷನ್ ಹಾಗೂ ಪ್ರಥಮದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಗೋಪಾಳ ರಾಮಕೃಷ್ಣ ವಿದ್ಯಾನಿಕೇತನದ ಎಸ್. ಎಂ. ಭಗತ್ 625 ಕ್ಕೆ 619 ಅಂಕ ಪಡೆದಿರುವುದು ವಿಶೇಷ. ಬಹುತೇಕ ವಿದ್ಯಾರ್ಥಿಗಳು 600 ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ.
ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದ ಎಲ್ಲಾ ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಡಿ.ಆರ್. ನಾಗೇಶ್ ಹಾಗೂ ಕಾರ್ಯದರ್ಶಿ ಶೋಭಾ ವೆಂಕಟರಮಣ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.