ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!*
*ಬೀರೂರು ಪಿಎಸ್‌ಐ ಪತ್ನಿ ಆತ್ಮಹತ್ಯೆ ಹಿಂದಿನ ಕಾರಣ ರಿವೀಲ್!*
ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು ?
ಬೀರೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಪತ್ನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀರೂರು ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಶ್ ಅವರ ಪತ್ನಿ ಪದ್ಮ (34) ಎಂಬುವವರೇ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ದುರ್ದೈವಿ. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ ಅವರು ಈ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.


