*ಪೋಕ್ಸೋ ಪ್ರಕರಣದ ಆರೋಪಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ* *2 ಲಕ್ಷ ರೂ.,ಗಳ ದಂಡ* *ಕುಂಸಿ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ*
*ಪೋಕ್ಸೋ ಪ್ರಕರಣದ ಆರೋಪಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ*
*2 ಲಕ್ಷ ರೂ.,ಗಳ ದಂಡ*
*ಕುಂಸಿ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ*
17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ಯುವಕನಿಗೆ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
(FTSC-1) ಶಿವಮೊಗ್ಗದಲ್ಲಿ ವಿಚಾರಣೆ ನಡೆಸಿ, ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ.
2022 ರಲ್ಲಿ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪೋಕ್ಸೋ ಪ್ರಕರಣ ನಡೆದಿತ್ತು. ಆಗಿನ ತನಿಖಾಧಿಕಾರಿ ಪಿ ಐ ತಿಪ್ಪೇಸ್ವಾಮಿ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಈ ಆದೇಶ ಹೊರಡಿಸಿದ್ದು, ನೊಂದ ಬಾಲಕಿಗೆ 1.80 ಲಕ್ಷ ರೂ.,ಗಳ ಪರಿಹಾರಕ್ಕೂ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.


