*ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರ;* *ಸಾರ್ವಜನಿಕ ಪ್ರವೇಶ ನಿಷೇಧಿಸಿ ತಾತ್ಕಾಲಿಕ ಆದೇಶ*

*ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರ;*

*ಸಾರ್ವಜನಿಕ ಪ್ರವೇಶ ನಿಷೇಧಿಸಿ ತಾತ್ಕಾಲಿಕ ಆದೇಶ*

ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆ ಬಿಡಾರವನ್ನು ಸಾರಗವಜನಿಕರಿಗೆ ತಾತ್ಕಾಲಿಕ ಪ್ರವೇಷ ನಿಷೇಧಿಸಿ ಅರಣ್ಯ ಇಲಾಖೆ ಆದೇಶಿಸಿದೆ.

ಕಳೆದ ಮೇ 18 ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಗಳ ದಾಂಧಲೆಯಲ್ಲಿ ಮಹಿಳೆ ಸಾವಿಗೀಡಾಗಿದ್ದ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ.

ಅರಣ್ಯ ಇಲಾಖಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮಾಣಿತ ಕಾರ್ಯ ವಿಧಾನ(SOP)ರೂಪಿಸುವ ಅಗತ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರೂಪಿಸುವವರೆಗೆ ಸಕ್ರೆಬೈಲು ಆನೆ ಬಿಡಾರದಲ್ಲಿ ಸಾರ್ವಜನಿಕ ಪ್ರವೇಶ ಸ್ಥಗಿತಗೊಳಿಸಲಾಗಿದೆ. ಮೇಲಾಧಿಕಾರಿಗಳ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.