*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ* *ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ* *ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ*

*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ*

*ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ*

*ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ*

ಇಂದು ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

SIR ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಹಾಗೂ ಜೂನ್ 1ರ ಸೋಮವಾರದಂದು ಶಿವಮೊಗ್ಗ ನಗರದ ಅಲ್ಲಮಪ್ರಭು ಬಯಲು ಮೈದಾನದ ಆವರಣದಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಹೊಸದಾಗಿ ನೂತನ KPS ಶಾಲೆಯು ರಾಜ್ಯಾದ್ಯಂತ ಆರಂಭವಾಗುತ್ತಿದ್ದು, ಇದರ ಉದ್ಘಾಟನೆ ಹಾಗೂ ಉನ್ನತಮಟ್ಟದ ವಿಶೇಷ ಕಾರ್ಯಕ್ರಮಕ್ಕೆ ಹಾಗೂ ಜಿಲ್ಲೆಯ ನೂರಾರು ಕೋಟಿ ಬೆಲೆಯ ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು ಇದರಲ್ಲಿ ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು.

ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಕ್ಯಾಬಿನೆಟ್ ಸಚಿವರು, ಅನೇಕ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಆಗಮಿಸಲಿದ್ದು, ಇದರ ಪೂರ್ವಭಾವಿ ಸಭೆಯನ್ನು ಇಂದು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರು, ಮುಖಂಡರು ಹಾಗೂ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.