*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;* *ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ* *ರಾಜಭವನದಲ್ಲಿ ಸರಳ ಸಮಾರಂಭ*

*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;*

*ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ*

*ರಾಜಭವನದಲ್ಲಿ ಸರಳ ಸಮಾರಂಭ*

ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ.

ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್‌ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

*ವೃಶ್ಚಿಕ ಲಗ್ನದಲ್ಲಿ ಅಧಿಕಾರ ಸ್ವೀಕಾರ*

ಈ ಮೊದಲು ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ದ್ವಾರಕನಾಥ್ ಗುರೂಜಿ ಅವರು ಜೂನ್ 5,6, ಹಾಗೂ 7 ತಾರೀಖು ನೀಡಿದ್ದರು.

ಆದ್ರೆ, ಇದೀಗ ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.