*ಡಿಕೆಶಿ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಅನ್ನದಾನ- ಹಯಗ್ರೀವ ಪ್ರಸಾದ ವಿತರಣೆ* *ದೇವೇಂದ್ರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ಎಂದ ಕವಿತಾ ರಾಘವೇಂದ್ರ*
*ಡಿಕೆಶಿ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಅನ್ನದಾನ- ಹಯಗ್ರೀವ ಪ್ರಸಾದ ವಿತರಣೆ*
*ದೇವೇಂದ್ರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ಎಂದ ಕವಿತಾ ರಾಘವೇಂದ್ರ*
ಡಿ.ಕೆ.ಶಿವಕುಮಾರ್ ರವರು ಬುಧವಾರ ಮುಖ್ಯಮಂತ್ರಿಗಳಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಆನಂದದ ಹಿನ್ನೆಲೆಯಲ್ಲಿ ಸಂಭ್ರಮ ಆಚರಿಸಲಾಗುತ್ತಿದ್ದು, ಶಿವಮೊಗ್ಗದ ಶಿವಪ್ಪನಾಯಕ ವೃತದಲ್ಲಿ ಬೆಳಿಗ್ಗೆ 11ಕ್ಕೆ ಕರ್ನಾಟಕ ಕೆಪಿಸಿಸಿ. ಕೆ ದೇವೇಂದ್ರಪ್ಪನವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಅನ್ನದಾನ ಹಾಗೂ ದೇವರಿಗೆ ಪ್ರಿಯವಾದ ಹಯಗ್ರೀವ ಪ್ರಸಾದ ವಿತರಿಸಲಾಗುವುದು ಎಂದು ಐ ಎನ್ ಟಿ ಯು ಸಿ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಕವಿತಾ ರಾಘವೇಂದ್ರ ತಿಳಿಸಿದ್ದಾರೆ.
ಸಾರ್ವಜನಿಕರು, ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಅವರು ವಿನಂತಿಸಿಕೊಂಡಿದ್ದಾರೆ.


