ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ರವರಿಗೆ ಅಭಿನಂದಿಸಿದ ಯೋಗೇಶ್- ಶಿವಕುಮಾರ್
ಬೆಂಗಳೂರಿನಲ್ಲಿ ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ರವರನ್ನು ಅವರ ನಿವಾಸದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ2023 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ಹಾಗೂ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ಅವರೊಂದಿಗೆ ಭೇಟಿ ಮಾಡಿ ಅಭಿನಂದಿಸಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಹಲವು ದಶಕಗಳಿಂದ ಸೇವೆ ಸಲ್ಲಿಸಿರುವ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಪಕ್ಷದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರ ಬೆನ್ನೆಲುಬಾಗಿ ನಿಂತು, ಅನೇಕ ಯುವ ರಾಜಕಾರಣಿಗಳಿಗೆ ಮಾರ್ಗದರ್ಶನ ನೀಡಿ ನಾಯಕರನ್ನಾಗಿ ರೂಪಿಸಿರುವುದು ಅವರ ವಿಶೇಷತೆ.
ಅವರ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಹಾಗೂ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿ ಎಂಬ ಹಾರೈಸಿದರು.


