ರಾಹುಲ್ ಗಾಂಧಿಯವರ ಜನ್ಮದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಅಚರಿಸಲು ನಿರ್ಧಾರ; ರಮೇಶ್ ಶಂಕರಘಟ್ಟ

ರಾಹುಲ್ ಗಾಂಧಿಯವರ ಜನ್ಮದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಅಚರಿಸಲು ನಿರ್ಧಾರ; ರಮೇಶ್ ಶಂಕರಘಟ್ಟ

ಶಿವಮೊಗ್ಗ ಜೂ.19: ಜೂನ್ 19ರಂದು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಜನದಿನವನ್ನು ಸಾಮಾಜಿಕ ನ್ಯಾಯ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು ಜೂನ್ 18 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಏರ್ಪಡಿಸಿದ್ದ ರಾಹುಲ್ ಗಾಂದಿಯವರ ಜನ್ಮದಿನಾಚಾರಣೆಯ ಸಂದರ್ಭದಲ್ಲಿ ಈ ವಿಷಯವನ್ನು ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಡಿ.ಟಿ. ಶ್ರೀನಿವಾಸ್ ರವರು ತಿಳಿಸಿದರು ಎಂದು ಹೇಳಿದ್ದಾರೆ.

ಜೂನ್ 21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನೂತನ ಕೆಪಿಸಿಸಿ ಅಧ್ಯಕ್ಷರು, ಹಿಂದುಳಿದ ವರ್ಗಗಳ ನಾಯಕರಾದ ಬಿ.ಕೆ. ಹರಿಪ್ರಸಾದ ಇವರ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳುತ್ತಿದ್ದಾರೆಂದು ತಿಳಿಸಿದ ರಮೇಶ್ ರವರು, ಆರ್ ಎಸ್ ಎಸ್ ನೋಂದಣಿಗೆ ಸಂಬಂಧಪಟ್ಟಂತೆ ಗೃಹಸಚಿವರಾದ ಪ್ರಿಯಾಂಕ ಖರ್ಗೆಯವರ ಹೇಳಿಕೆಯನ್ನು ಬೆಂಬಲಿಸುತ್ತೇವೆ. ಒಂದು ಸಣ್ಣ ಸಂಘ-ಸಂಸ್ಥೆಯನ್ನು ತೆರೆಯಬೇಕಾದರೂ ಸಹಾ ನೋಂದಣಿ ಮಾಡಿಸಬೇಕೆನ್ನುವ ನಿಯಮವಿರುವಾಗ ಅರ್‍ಎಸ್‍ಎಸ್ ನಂತಹ ದೊಡ್ಡ ಸಂಸ್ಥೆ ನೋಂದಣಿ ಮಾಡಿಸದೇ ಇರುವದು ಅಕ್ಷಮ್ಯವೆಂದು ಎಂದು ಹೇಳಿದ್ದಾರೆ