*ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಎ.ಎಚ್.ಸುನಿಲ್ ನೇಮಕ*
*ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಎ.ಎಚ್.ಸುನಿಲ್ ನೇಮಕ*
ಶಿವಮೊಗ್ಗ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ನಿವಾಸಿ ಎ.ಎಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ ಅನ್ವಯ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಒಟ್ಟು 9 ಸದಸ್ಯರನ್ನು ಸಮಿತಿಗೆ ನೇಮಿಸಲಾಗಿದೆ. ಮೂರು ವರ್ಷದ ಅವಧಿಗೆ ಎ.ಎಚ್.ಸುನಿಲ್ ಅವರು ಸಮಿತಿ ಸದಸ್ಯರಾಗಿರುತ್ತಾರೆ.
ಎ.ಎಚ್.ಸುನಿಲ್ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಕಾರ್ಯದರ್ಶಿ ಹಾಗೂ ರಾಮಣ್ಣ ಶ್ರೇಷ್ಠಿ ಪಾರ್ಕ್ನ ಶ್ರೀ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


