*ನಂಬರ್ ಪ್ಲೇಟ್ ಇಲ್ಲದ 70 ವಾಹನಗಳನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ ಪೊಲೀಸರು!* *ನಂಬರ್ ಪ್ಲೇಟ್ ಇಲ್ಲದೇ ವಾಹನ ಓಡಿಸುವವರೇ ಹುಷಾರ್…*
*ನಂಬರ್ ಪ್ಲೇಟ್ ಇಲ್ಲದ 70 ವಾಹನಗಳನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ ಪೊಲೀಸರು!*
*ನಂಬರ್ ಪ್ಲೇಟ್ ಇಲ್ಲದೇ ವಾಹನ ಓಡಿಸುವವರೇ ಹುಷಾರ್…*

ಶಿವಮೊಗ್ಗ ನಗರದಲ್ಲಿ ಕೆಲವು ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದ ಇ-ಚಲನ್ಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ತಮ್ಮ ವಾಹನಗಳ ನೋಂದಣಿ ಸಂಖ್ಯೆಯ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ವಾಹನ ಚಲಾಯಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಂಥ 70 ವಾಹನಗಳನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರದಂದು ಶಿವಮೊಗ್ಗ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ, ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ಸುಮಾರು 70 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಾಹನಗಳ ವಿರುದ್ಧ ಕೇಂದ್ರ ಮೋಟಾರು ವಾಹನ ನಿಯಮಗಳು 1988 ನಿಯಮ 50(3)ರ (CMV Rule 50(3) ಹಾಗೂ ಕಲಂ 177 ಐಎಂವಿ ಕಾಯ್ದೆಯ (IMV Act Section 177) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಸಿಪಿಐ ದೇವರಾಜ್ ತಿಳಿಸಿದ್ದಾರೆ
ಮುಂದಿನ ದಿನಗಳಲ್ಲಿಯೂ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸುವಂತೆ ಕೋರಿದ್ದಾರೆ.


