*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*

*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ*

*ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ*

*ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*

 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ನೀಟ್ ವ್ಯವಸ್ಥೆಯ ವಿರುದ್ಧ, ಪ್ರಧಾನಿ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಡಳಿತ ವ್ಯವಸ್ಥೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಜುಲೈ 1 ರಂದು ಬೃಹತ್ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ತಕ್ಷಣ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು. ಚಾಕಲೇಟ್ ಪ್ರಧಾನಿ ಈ ಮಕ್ಕಳಿಗೆ ಸಾಂತ್ವಾನ ಹೇಳುವ ಕೆಲಸವನ್ನಾದ್ರೂ ಮಾಡಬೇಕು. ನೀಟ್ ರದ್ದು ಮಾಡಿ ಸಿಇಟಿ ಮಾದರಿಯಲ್ಲೇ ಪರೀಕ್ಷೆಗಳು ನಡೆಸಬೇಕೆಂದು ಒತ್ತಾಯಿಸಿದರು.

ಮಾಜಿ ಸಚಿವರಾದ ಮಧು ಬಂಗಾರಪ್ಪ, ಕಿಮ್ಮನೆ ರತ್ನಾಕರ್, ಹಾಲಿ ಶಾಸಕರು, ಕಾಂಗ್ರೆಸ್ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಸೈನ್ಸ್ ಮೈದಾನದಿಂದ ಗೋಪಿ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಗೋಪಿ ಸರ್ಕಲ್ ಗೆ ಜಾಥಾ ಬರಲಿದೆ. ಸುಮಾರು 10 ಸಾವಿರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.