*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…*
*ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ*
*ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*

ಹೇಳಿಕೆ ದಾಖಲಿಸಿಕೊಂಡು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಇರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ನ್ಯಾ.ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ಈ ಆದೇಶ ಮಾಡಿದ್ದು, ಲೋಕಾಯುಕ್ತ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಂತಾಗಿದೆ.
ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಬಂಧನದಿಂದ ರಕ್ಷಣೆ ನೀಡಬೇಕು. ಹೇಳಿಕೆ ದಾಖಲಿಸಿಕೊಂಡು ಪ್ರಕರಣ ರದ್ದು ಮಾಡಬೇಕೆಂದು ಈಶ್ವರಪ್ಪ ಪರ ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಲೋಕಾಯುಕ್ತ ಪರವಾಗಿ ಎಸ್ ಪಿ ಪಿ ವೆಂಕಟೇಶ್ ಅರಬಟಿ ವಾದ ಮಂಡಿಸಿದ್ದು, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪೀಠದ ಮುಂದೆ ಹೇಳಿದರು.
ಕೆ.ಎಸ್.ಈಶ್ವರಪ್ಪ ವಿರುದ್ಧ ವಕೀಲ ಬಿ.ವಿನೋದ್ ಖಾಸಗಿ ದೂರು ದಾಖಲಿಸಿದ್ದರು.


