*ಸುರಕ್ಷಿತ ಸಿಟಿ ಬಸ್ ಸೇವೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ನ ಮಹತ್ವದ ಹೆಜ್ಜೆ*

🚌 *ಸುರಕ್ಷಿತ ಸಿಟಿ ಬಸ್ ಸೇವೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ನ ಮಹತ್ವದ ಹೆಜ್ಜೆ*

ಭಾನುವಾರ ಶಿವಮೊಗ್ಗ ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಎಲ್ಲಾ ಸಿಟಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಲಾಯಿತು.

ಸಭೆಯಲ್ಲಿ  ಸಂಜೀವ್ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಉಪವಿಭಾಗ ಅವರು ಭಾಗವಹಿಸಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆಗಳು ಮತ್ತು ಸಲಹೆಗಳನ್ನು ಆಲಿಸಿ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಹತ್ವದ ಸೂಚನೆಗಳನ್ನು ನೀಡಿದರು.

ಮುಖ್ಯ ಸೂಚನೆಗಳು:

✅ ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
✅ ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.
✅ ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು.

ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ ಸಮಸ್ಯೆಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ “Public Eye”, ಶಿವಮೊಗ್ಗ ಸಂಚಾರ ಪೊಲೀಸ್ ಸಹಾಯವಾಣಿ ಹಾಗೂ ಪೊಲೀಸ್ ತುರ್ತು ಸಹಾಯವಾಣಿ (112) ಸಂಖ್ಯೆಗಳಿರುವ ಜಾಗೃತಿ ಪೋಸ್ಟರ್‌ಗಳನ್ನು ಸಿಟಿ ಬಸ್‌ಗಳಲ್ಲಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಟ್ರಾಫಿಕ್ ಸಿಪಿಐ ದೇವರಾಜ್ ಸೇರಿದಂತೆ ಹಲವರಿದ್ದರು.