ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ

ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ

ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸೋಮವಾರ ೨೦ ಸಚಿವರ ಪಟ್ಟಿ ಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಯಾಗಿದೆ.
ಮಂತ್ರಿ ಸ್ಥಾನದ ನಿರೀಕ್ಷೆ ಯಲ್ಲಿದ್ದ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಕ್ಷೇತ್ರದ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮತ್ತೊಮ್ಮೆ ನಿರಾಸೆ ಯಾಗಿದೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಗೋಪಾಲಕೃಷ್ಣ, ಸಂಗಮೇಶ್ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ತಮ್ಮ ಶಾಸಕ ಸ್ಥಾನಕ್ಕೆ ಆ.೪ರ ಬೆಳಗ್ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ೨೦ ಸ್ಥಾನಗಳು ಬಾಕಿ ಉಳಿದಿದ್ದವು. ಇಂದು ಕಾಂಗ್ರೆಸ್ ಹೈಕಮಾಂಡ್ ಸಾಕಷ್ಟು ಅಳೆದುತೂಗಿ ೨೦ ಸಚಿವರ ಹೆಸರನ್ನು ಅಂತಿಮ ಗೊಳಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯಿಂದ ಮತ್ತೊಮ್ಮೆ ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ. ಈಡಿಗ ಕೋಟಾದಡಿ ಸಚಿವ ರಾಗಲು ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲ ಕೃಷ್ಣ ಬೇಳೂರು ತೀವ್ರ ಲಾಭಿ ನಡೆಸಿದ್ದರು. ಜತೆಗೆ ಡಿಕೆ ಸಂಪುಟದಲ್ಲಿ ಸಚಿವರಾಗುವ ವಿಶ್ವಾಸದಲ್ಲಿದ್ದರು. ಆದರೆ ಮತ್ತೊಮ್ಮೆ ಬೇಳೂರು ಗೋಪಾಲಕೃಷ್ಣಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಕೊಟ್ಟಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೇಳೂರು ಘೋಷಣೆ: ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಾನೇನು ಪಕ್ಷ ವಿರೋಧಿ ಚಟುವಟಿಕೆ ಮಾಡಿರಲಿಲ್ಲ. ಇಲ್ಲಿ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ನಾನು ಕೂಡಾ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್‌ನಲ್ಲಿ ಮುಖ್ಯ ಮಂತ್ರಿ ಗಳ ಹಾಗೂ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾ ಗುತ್ತಿದೆ ಎಂದು ಆರೋಪಿಸಿದ್ದಾರೆ.