ಶಿವಮೊಗ್ಗ ಮಹಾನಗರ ಪಾಲಿಕೆಯ ‘ನಾಡಹಬ್ಬ ದಸರಾ–2026; ಮಕ್ಕಳ ದಸರಾ ಜಾಥಾಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಶಿವಮೊಗ್ಗ ಮಹಾನಗರ ಪಾಲಿಕೆಯ ‘ನಾಡಹಬ್ಬ ದಸರಾ–2026;

ಮಕ್ಕಳ ದಸರಾ ಜಾಥಾಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಶಿವಮೊಗ್ಗ: ಮಲೆನಾಡಿನ ಕೇಂದ್ರ ಬಿಂದುವಾಗಿರುವ ಶಿವಮೊಗ್ಗ ನಗರದಲ್ಲಿ ಸಾಂಸ್ಕೃತಿಕ ವೈಭವವನ್ನು ಸಾರುವ ಪ್ರತಿಷ್ಠಿತ ‘ನಾಡಹಬ್ಬ ದಸರಾ–2026’ ಮಹೋತ್ಸವಕ್ಕೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದ ಅಂಗವಾಗಿ ನಗರದಲ್ಲಿ ಅತ್ಯಂತ ಉತ್ಸಾಹದಿಂದ ಜರುಗಿದ ‘ಮಕ್ಕಳ ದಸರಾ ಜಾಥಾ’ ಕಾರ್ಯಕ್ರಮಕ್ಕೂ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಸರಾ ಮಹೋತ್ಸವವು ನಮ್ಮ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹಾಸಂಗಮವಾಗಿದೆ. ಯುವಪೀಳಿಗೆ ಮತ್ತು ಪುಟಾಣಿ ಮಕ್ಕಳಿಗೆ ನಮ್ಮ ಪರಂಪರೆಯ ಪರಿಚಯ ಮಾಡಿಕೊಡುವಲ್ಲಿ ಮಕ್ಕಳ ದಸರಾ ಜಾಥಾ ಮಹತ್ವದ ಪಾತ್ರ ವಹಿಸುತ್ತದೆ. ನಗರದ ಪ್ರತಿಯೊಬ್ಬ ನಾಗರಿಕನೂ ಈ ವೈವಿಧ್ಯಮಯ ಉತ್ಸವದಲ್ಲಿ ಸಂಭ್ರಮದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.