*ನವದೆಹಲಿಯ ರಾಷ್ಟ್ರೀಯ ಸಹಕಾರ ಶಿಕ್ಷಣ ಕೇಂದ್ರಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಉಪಾಧ್ಯಕ್ಷ ಬಿ.ಕೆ.ಶಿವಕುಮಾರ್*

*ನವದೆಹಲಿಯ ರಾಷ್ಟ್ರೀಯ ಸಹಕಾರ ಶಿಕ್ಷಣ ಕೇಂದ್ರಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಉಪಾಧ್ಯಕ್ಷ ಬಿ.ಕೆ.ಶಿವಕುಮಾರ್*

ನವದೆಹಲಿಯಲ್ಲಿರುವ ರಾಷ್ಟ್ರೀಯ ಸಹಕಾರ ಶಿಕ್ಷಣ ಕೇಂದ್ರಕ್ಕೆ (National Centre for Cooperative Education) ಭೇಟಿ ನೀಡಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಉಪಾಧ್ಯಕ್ಷ ಬಿ.ಕೆ.ಶಿವಕುಮಾರ್ ಸಂಸ್ಥೆಯ ಕಾರ್ಯವೈಖರಿ, ಸಹಕಾರ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಶಿಕ್ಷಣ ಮತ್ತು ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಉಪಾಧ್ಯಕ್ಷನಾಗಿ, ರಾಜ್ಯದ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು, ಸಹಕಾರ ಸಂಘಗಳ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ನಿರ್ದೇಶಕರು ಮತ್ತು ಸಿಬ್ಬಂದಿಗೆ ಗುಣಮಟ್ಟದ ತರಬೇತಿ ಒದಗಿಸುವ ನಿಟ್ಟಿನಲ್ಲಿ ಇಂತಹ ಸಂಸ್ಥೆಗಳ ಕಾರ್ಯವೈಖರಿಯನ್ನು ತಿಳಿದುಕೊಳ್ಳುವುದು ನನ್ನ ಭೇಟಿಯ ಪ್ರಮುಖ ಉದ್ದೇಶವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ನ್ಯಾಷನಲ್ ಕೋಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (NCUI) ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಕೇಂದ್ರವು ಸಹಕಾರ ತತ್ವಗಳು, ನಿರ್ವಹಣೆ, ನಾಯಕತ್ವ ಹಾಗೂ ಸಹಕಾರ ಸಂಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಅಗತ್ಯವಾದ ಶಿಕ್ಷಣ ಮತ್ತು ತರಬೇತಿ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಈ ಭೇಟಿಯ ಮೂಲಕ ದೊರೆತ ಮಾಹಿತಿ ಮತ್ತು ಅನುಭವಗಳನ್ನು ಕರ್ನಾಟಕದ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳುವ ಆಶಯ ಹೊಂದಿದ್ದೇನೆ. ಸಹಕಾರ ಸಂಸ್ಥೆಗಳ ಬಲವರ್ಧನೆ, ಯುವಜನರಲ್ಲಿ ಸಹಕಾರ ಮನೋಭಾವ ಬೆಳೆಸುವುದು ಹಾಗೂ ಸಹಕಾರಿಗಳ ಸಬಲೀಕರಣ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದರು.