*ಕ್ರಾಂತಿಕಾರಿ ಪರಂಪರೆಯ ಶಿವಮೊಗ್ಗದಲ್ಲಿ ಸೈದ್ಧಾಂತಿಕ ಸಂಘಟನೆ ಬಲವರ್ಧನೆಯೇ ನಮ್ಮ ಸಂಕಲ್ಪ* *ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್*
*ಕ್ರಾಂತಿಕಾರಿ ಪರಂಪರೆಯ ಶಿವಮೊಗ್ಗದಲ್ಲಿ ಸೈದ್ಧಾಂತಿಕ ಸಂಘಟನೆ ಬಲವರ್ಧನೆಯೇ ನಮ್ಮ ಸಂಕಲ್ಪ*
*ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್*

ಸ್ವಾತಂತ್ರ್ಯ ಹೋರಾಟದ ಉಜ್ವಲ ಪರಂಪರೆ ಹೊಂದಿರುವ ಶಿವಮೊಗ್ಗ ಜಿಲ್ಲೆ ಕ್ರಾಂತಿಕಾರಿ ಹೋರಾಟಗಳು ಹಾಗೂ ಸಮಾಜವಾದಿ ಚಿಂತನೆಗಳಿಗೆ ಹೆಸರಾದ ನೆಲ. ಆದರೆ, ಸಮಾಜವಾದಿ ವಿಚಾರಧಾರೆಗೆ ಭದ್ರ ನೆಲೆಯಾಗಿದ್ದ ಜಿಲ್ಲೆ ಇಂದು ಕೋಮುವಾದದತ್ತ ವಾಲುತ್ತಿರುವುದು ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ವಿಚಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆತಂಕ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು,
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾತ್ಮಕವಾಗಿ ಬಲಿಷ್ಠವಾಗಿದೆ. ಈ ಶಕ್ತಿಯನ್ನು ತಳಮಟ್ಟದಲ್ಲಿ ಸೈದ್ಧಾಂತಿಕವಾಗಿ ಮತ್ತಷ್ಟು ಗಟ್ಟಿಗೊಳಿಸುವ ಮೂಲಕ ಕೋಮುವಾದಿ ರಾಜಕಾರಣವನ್ನು ಎದುರಿಸಬೇಕಿದೆ ಎಂದರು.
ಶಿಕಾರಿಪುರದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ನಡೆದ ಜನತಾ ಜೋಡೋ ಕಾರ್ಯಕ್ರಮದ ಯಶಸ್ಸೇ ಜಿಲ್ಲೆಯ ಕಾಂಗ್ರೆಸ್ ಸಂಘಟನಾ ಶಕ್ತಿಗೆ ಸಾಕ್ಷಿಯಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತೀರ್ಮಾನದಂತೆ ‘ಮತ ಉಳಿಸಿ – ದೇಶ ಉಳಿಸಿ’ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕಿದೆ. ಮತದಾನದ ಹಕ್ಕು, ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯಸಭಾ ಸದಸ್ಯರಾದ Dr.Syed Naseer Hussain, MP, Rajya Sabha , ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ , ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಸ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಯೋಗೇಶ್ ಸೇರಿದಂತೆ ಅನೇಕ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


