**ಶಾಸಕಿ ಶಾರದಾ ಪೂರ್ಯನಾಯ್ಕ್ ಅವರ ನೇತೃತ್ವದಲ್ಲಿ jds ಪಕ್ಷ ಸೇರಿದ ಹಲವರು**

**ಶಾಸಕಿ ಶಾರದಾ ಪೂರ್ಯನಾಯ್ಕ್ ಅವರ ನೇತೃತ್ವದಲ್ಲಿ jds ಪಕ್ಷ ಸೇರಿದ ಹಲವರು**

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರ ನೇತೃತ್ವದಲ್ಲಿ ಇಂದು ಪ್ರತಿಪಕ್ಷವನ್ನು ತೊರೆದು ಹಲವರು ಜನತಾ ದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಯಾದರು.

ನಂಜುಂಡಸ್ವಾಮಿ, ವಿಜಯಕುಮಾರ್, ಪ್ರಮೋದ್, ಮಣಿಕಂಠ, ಪ್ರಜ್ವಲ್, ಅರುಣ್, ಪರಮೇಶ್, ಮನೋಜ್, ಕೆಂಚ, ಅಣ್ಣಪ್ಪ, ಮೋಹನ, ಶರತ್, ಶ್ರೀಧರ್, ರವಿ ಹಾಗೂ ಮಹಂತೇಶ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಪಕ್ಷದ ಶಾಲು ಹೊದಿಸುವ ಮೂಲಕ ನೂತನ ಸದಸ್ಯರನ್ನು ಜೆಡಿಎಸ್ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಲ್ಲಿ ಆಸಕ್ತಿ ಹೊಂದಿ ಪಕ್ಷಕ್ಕೆ ಸೇರ್ಪಡೆಯಾಗಿರುವ ನೂತನ ಸದಸ್ಯರು ಮುಂದಿನ ದಿನಗಳಲ್ಲಿ ಸಂಘಟನೆಯ ಬಲವರ್ಧನೆಗೆ ಕೈಜೋಡಿಸುವ ನಿರೀಕ್ಷೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.