ರೈತರಿಗೆ ಪುನಶ್ಚೇತನ ಮತ್ತು ಯಂತ್ರೋಪಕರಣ ಬಳಕೆ ಅರಿವು ನೀಡುತ್ತಿರುವ ಕೃಷಿ ಮೇಳ *ವಿಜ್ಞಾನ ಮತ್ತು ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು: ಪಿ. ಎಂ. ನರೇಂದ್ರಸ್ವಾಮಿ*
ರೈತರಿಗೆ ಪುನಶ್ಚೇತನ ಮತ್ತು ಯಂತ್ರೋಪಕರಣ ಬಳಕೆ ಅರಿವು ನೀಡುತ್ತಿರುವ ಕೃಷಿ ಮೇಳ
*ವಿಜ್ಞಾನ ಮತ್ತು ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು: ಪಿ. ಎಂ. ನರೇಂದ್ರಸ್ವಾಮಿ*

ಶಿವಮೊಗ್ಗ
ಬರ ಮತ್ತು ಪ್ರಾಕೃತಿಕ ವಿಕೋಪಗಳ ನಡುವೆ ಕೃಷಿಯನ್ನು ಲಾಭದಾಯಕವಾಗಿ ಮತ್ತು ಯಶಸ್ವಿಯಾಗಿ ಮುನ್ನಡೆಸುವುದು ಹಾಗೂ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳ ಬಳಕೆಯ ಬಗ್ಗೆ ಅರಿವು ಮೂಡಿಸುವುದು ಕೃಷಿ ಮೇಳದ ಮುಖ್ಯ ಉದ್ದೇಶವಾಗಿದ್ದು, ರೈತರೆಲ್ಲ ಇದರ ಸದುಪಯೋಗ ಪಡೆಯಬೇಕೆಂದು ಕೃಷಿ ಸಚಿವರು ಹಾಗೂ ಕೆ.ಶಿ.ನಾ.ಕೃ.ತೋ.ವಿ.ವಿ
ಸಹ ಕುಲಾಧಿಪತಿಗಳಾದ ಪಿ. ಎಂ. ನರೇಂದ್ರಸ್ವಾಮಿ ಕರೆ ನೀಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ “ಬರ ನಿರ್ವಹಣೆಗಾಗಿ ನಾವೀನ್ಯತಾ ಕೃಷಿ” ಎಂಬ ಧೈಯವಾಕ್ಯದೊಂದಿಗೆ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಅ.31 ರಿಂದ ನ.2 ರವರೆಗೆ ಆಯೋಜಿಸಲಾಗಿರುವ ‘ಕೃಷಿ ಮತ್ತು ತೋಟಗಾರಿಕೆ ಮೇಳ-2026
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಸರಿಯಾಗಿ ಬಳಸಿಕೊಂಡು ಬರವನ್ನು ಮೆಟ್ಟಿ ನಿಲ್ಲಬಹುದಾಗಿದ್ದು ರೈತರು ಮುಕ್ತವಾಗಿ ವಿಜ್ಞಾನಿಗಳ ಸಲಹೆ ಬಳಸಿಕೊಂಡು ಮುನ್ನಡೆಯಬೇಕೆಂದರು.
ರೈತ ಕುಲವನ್ನು, ರಾಜ್ಯವನ್ನು ಮತ್ತು ಆಹಾರೋತ್ಪಾದನಾ ನಿರ್ಣಯವನ್ನು ಗಮನದಲ್ಲಿಟ್ಟುಕೊಂಡು ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸುವುದು ಇವತ್ತಿನ ಕೃಷಿ ಮೇಳದ ಸವಾಲಾಗಿದೆ.
ರೈತರಿಗೆ ನೆರವಾಗಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ನವೆಂಬರ್ ತಿಂಗಳಲ್ಲಿ ‘ನೇಗಿಲಯೋಗಿ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಬರದಿಂದ ಕಂಗೆಟ್ಟಿರುವ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳನ್ನು ಬಳಸುವ ಜವಾಬ್ದಾರಿಯನ್ನು ಅರಿವು ಮೂಡಿಸುತ್ತದೆ. ರಾಜ್ಯದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರಾಥಮಿಕವಾಗಿ ಪ್ರತಿ ರೈತನಿಗೆ ರೂ.2,500 ಗಳ ಆರಂಭಿಕ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.
ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳು, ಹವಾಮಾನ ವೈಪರೀತ್ಯ ತಡೆಬಲ್ಲ ತಳಿಗಳ ಹೊಸ ಆವಿಷ್ಕಾರಗಳು ಹಾಗೂ ಸೂಕ್ಷ್ಮ ನೀರಾವರಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಮೇಳದಲ್ಲಿ ಮಾಹಿತಿ ನೀಡಲಾಗುತ್ತದೆ.
ನೆಗಲು ಯೋಗ ಯೋಜನೆ: ನವೆಂಬರ್ ತಿಂಗಳಲ್ಲಿ ‘ನೇಗಲು ಯೋಗ’ ಯೋಜನೆ ಅನುಷ್ಠಾನಗೊಳ್ಳಲಿದ್ದು, ಇದರ ಮೂಲಕ ಬರದಿಂದ ಕಂಗೆಟ್ಟಿರುವ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳನ್ನು ಬಳಸುವ ಜವಾಬ್ದಾರಿಯನ್ನು ಅರಿವು ಮೂಡಿಸಲಾಗುತ್ತದೆ.
ಆರಂಭಿಕ ಪರಿಹಾರ: ರಾಜ್ಯದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೇಂದ್ರದ ನಿಲುವಿನ ಜೊತೆಗೆ, ಪ್ರತಿಯೊಬ್ಬ ರೈತರಿಗೆ ಆರಂಭಿಕ ಪರಿಹಾರವಾಗಿ 2,500 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಕೃಷಿ ಕ್ಷೇತ್ರದಲ್ಲಿ ಸೂಕ್ಷ್ಮ ನೀರಾವರಿ ತಂತ್ರಜ್ಞಾನ, ಸಮಗ್ರ ಕೃಷಿ ಪದ್ಧತಿ, ಡಿಜಿಟಲ್ ಕೃಷಿ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಶಿವಮೊಗ್ಗದಲ್ಲಿ ಅಡಿಕೆ ಹಾಗೂ ಶುಂಠಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಂಬಾರು ಬೆಳೆಗಳು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಏಕ ಬೆಳೆಗಿಂತ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡುವಂತೆ ತಿಳಿಸಲಾಗಿದೆ.
ಯೂನಿವರ್ಸಿಟಿ ಸಾಧನೆ: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ಜೆ.ಆರ್.ಎಫ್. ಮತ್ತು ಎಸ್.ಆರ್.ಎಫ್. ಫಲಿತಾಂಶದಲ್ಲಿ 81 ಫೆಲೋಶಿಪ್ಗಳನ್ನು ಗಳಿಸುವ ಮೂಲಕ ರಾಜ್ಯದ ಐದು ವಿಶ್ವವಿದ್ಯಾಲಯಗಳಲ್ಲಿ ಅತ್ಯಧಿಕ ಸ್ಥಾನ ಪಡೆದಿದೆ.
ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ: ಕರ್ನಾಟಕ ಅಗ್ರಿಟೆಕ್ ಮಿಷನ್ 2026 ರ ಅಡಿಯಲ್ಲಿ ದೂರ ಸಂವೇದಿ ತಂತ್ರಜ್ಞಾನ, ಡ್ರೋನ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮುಂತಾದ ಆಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು ಬಳಸಿ ರೈತರಿಗೆ ಸಲಹೆ ಮತ್ತು ಸೇವೆ ಒದಗಿಸಲು ರೂ. 35.99 ಕೋಟಿ ಅಂದಾಜು ಮೊತ್ತದಲ್ಲಿ ಅನುಮೋದನೆ ನೀಡಲಾಗಿದೆ.
ರೈತರಿಗೆ ಕೃಷಿ ಸಂಬಂಧಿತ, ಸಕಾಲಿಕ ಹಾಗೂ ಸ್ಥಳ ನಿರ್ದಿಷ್ಟ ಸಲಹೆಗಳನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರಾಯೋಗಿಕವಾಗಿ ಐದು ಜಿಲ್ಲೆಗಳಲ್ಲಿ ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ. ಮಂಡ್ಯ, ಬೆಳಗಾವಿ, ವಿಜಯಪುರ, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ರೈತರಿಗೆ ಬೆಳೆ ಉತ್ಪಾದನೆ ಮತ್ತು ತಂತ್ರಜ್ಞಾನದ ಕುರಿತು ಜಾಗೃತಿ ಮೂಡಿಸಲು ಹಾಗೂ ಸಂದೇಶಗಳನ್ನು ತಲುಪಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 10-09-2026 ರಂದು ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಗೆ ಚಾಲನೆ ನೀಡಿದ್ದು, ದಿನಾಂಕ 17-10-2026 ರ ವೇಳೆಗೆ ಈಗಾಗಲೇ ಸುಮಾರು 27 ಲಕ್ಷದ 15 ಸಾವಿರ ಕೃಷಿ ಸಲಹಾ ಸಂದೇಶಗಳನ್ನು ರೈತರಿಗೆ ಯಶಸ್ವಿಯಾಗಿ ತಲುಪಿಸಲಾಗಿದೆ.
ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಕೃಷಿಯನ್ನು ಕೈಗಾರಿಕಾ ಮಾದರಿಯಲ್ಲಿ ಬೆಳೆಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ಐಟಿ ಕ್ಷೇತ್ರದಲ್ಲಿ ಉದ್ಯೋಗ ನಷ್ಟವಾಗುತ್ತಿರುವ ಸವಾಲುಗಳ ನಡುವೆ, ಕೃಷಿ ಕ್ಷೇತ್ರವನ್ನು ಬಲಪಡಿಸಲು ವಿಶ್ವವಿದ್ಯಾಲಯಗಳು ಹಾಗೂ ವಿವಿಧ ಎನ್ಜಿಒ ಗಳ ಸಹಯೋಗದೊಂದಿಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ.
ವಿಶೇಷವಾಗಿ, 30,000 ಎಕರೆ ಪ್ರದೇಶದಲ್ಲಿ ಹನಿ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದ್ದು, ಇದು ರಾಷ್ಟ್ರದಲ್ಲೇ ಮಾದರಿ ಪ್ರದೇಶವಾಗಿ ಹೊರಹೊಮ್ಮಲು ಸಿದ್ಧಗೊಂಡಿದೆ. ಸಾಮೂಹಿಕ ಕೃಷಿ, ಏಕ ಬೆಳೆ ಪದ್ಧತಿ ಹಾಗೂ ವಾಣಿಜ್ಯ ಬೆಳೆಗಳ ಉತ್ಪಾದನೆಗೆ ಆದ್ಯತೆ ನೀಡಿ, ಸಂಸ್ಕರಿಸಿದ ಕೃಷಿ ಉತ್ಪನ್ನಗಳನ್ನು ನೇರವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸುವ ಹೊಸ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದರು.
ಸಂಸದರಾದ ಬಿ.ವೈ.ರಾಘವೇಂದ್ರ ಬರ ನಿರ್ವಹಣೆ” ನೇಗಿಲ ಮಿಡಿತ ವಿಶೇಷ ಸಂಚಿಕೆ ಹಾಗೂ ರೈತರ ಯಶೋಗಾಥೆ ಬಿಡುಗಡೆಗೊಳಿಸಿ ಮಾತನಾಡಿದರು
ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಶಿವಮೊಗ್ಗ ಡಾ. ಎಮ್. ವಿ. ಧನಂಜಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ,ಈ ವರ್ಷ ಪ್ರಥಮ ಬಾರಿಗೆ ಆನ್ಲೈನ್ ಮೂಲಕ ಮಳಿಗೆ ಬುಕಿಂಗ್ ವ್ಯವಸ್ಥೆ ಮಾಡಲಾಗಿದ್ದು, 600ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆಗಳನ್ನು ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಬರ ನಿರ್ವಹಣೆಗಾಗಿ ವಿಜ್ಞಾನಿಗಳು ಮತ್ತು ರೈತರ ನಡುವೆ ವಿಶೇಷ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮೇಳದ ಸಂದೇಶವು ರಾಜ್ಯದ ಮೂಲೆ ಮೂಲೆಗೆ ತಲುಪಲು ವಿಶ್ವವಿದ್ಯಾಲಯದ ವ್ಯಾಪ್ತಿಯ 6 ಜಿಲ್ಲೆಗಳ ಪತ್ರಕರ್ತರು ಸೇರಿದಂತೆ ರಾಜ್ಯಮಟ್ಟದ ವಿಶೇಷ ಪತ್ರಿಕಾಗೋಷ್ಠಿ ನಡೆಸಲಾಗಿದೆ.
ವಿಶ್ವವಿದ್ಯಾಲಯದಲ್ಲಿ 4 ಆವರಣಗಳಿದ್ದು, ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಜ್ಞಾನ ವಿಭಾಗಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್ಡಿ ಶಿಕ್ಷಣ ನೀಡಲಾಗುತ್ತಿದೆ. ಇದುವರೆಗೆ 3,900ಕ್ಕೂ ಹೆಚ್ಚು ಪದವಿ, 1,000 ಸ್ನಾತಕೋತ್ತರ ಹಾಗೂ 138 ಪಿಎಚ್ಡಿ ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಈ ವರ್ಷದಿಂದ 5 ಹೊಸ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದ್ದು, ಪ್ರವೇಶ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ದೆ. ಈ ಪ್ರಸ್ತುತ ವರ್ಷದಲ್ಲಿ ವಿಶ್ವವಿದ್ಯಾಲಯದ 81 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಜೆಆರ್ ಎಫ್ ಮತ್ತು ಎಸ್ ಆರ್ ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ.
ವಿದೇಶಿ ತರಬೇತಿ ಹಾಗೂ ಡ್ರೋನ್ ದೀದಿ ಯೋಜನೆ: ವಿದ್ಯಾರ್ಥಿಗಳಿಗೆ ವಿದೇಶಿ ಸಂಸ್ಥೆಗಳ ಸಹಭಾಗತ್ವದಲ್ಲಿ ಕೌಶಲ್ಯ ತರಬೇತಿ ನೀಡುವ ವ್ಯವಸ್ಥೆ ಮುಂದುವರಿದಿದೆ. ಜೊತೆಗೆ ಕೇಂದ್ರ ಸರ್ಕಾರದ ‘ಡ್ರೋನ್ ದೀದಿ’ ಯೋಜನೆಯಡಿ 96 ಜನರಿಗೆ ಡ್ರೋನ್ ತರಬೇತಿ ನೀಡಿ ಉದ್ಯಮಶೀಲತೆಗೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ತಳಿಗಳು, ಸಂಶೋಧನೆ, ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಕೃಷಿಕರ ಆದಾಯ ವೃದ್ದಿಗೆ ಉತ್ಪನ್ನಗಳಮೌಲ್ಯವರ್ಧನೆ, ಉದ್ಯೋಗ ಸೃಷ್ಟಿಯ ಆಧಾರದಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಪದ್ಮಶ್ರೀ ಪುರಸ್ಕೃತ ಕೃಷಿಕರು, ಪದ್ಮಶ್ರೀ ಪುರಸ್ಕೃತ ಕೃಷಿಕರು, ಕಾಸರಗೋಡು ಸತ್ಯನಾರಾಯಣ ಬೆಲೆಕೇರಿ
ಒಡಂಬಡಿಕೆಗಳ ಸಹಿ ಹಾಗೂ ಹಸ್ತಾಂತರ ಮತ್ತು ಕೃಷಿ ಉತ್ಪನ್ನ ಬಿಡುಗಡೆಗೊಳಿಸಿದ ಹಾಗೂ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿದರು.
ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಪರಿಶಿಷ್ಟ ಜಾತಿ, ವರ್ಗ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಚೇತನ್ ಕೆ. ,ಕೃಷಿಕ ಸಮಾಜದ ನಗರದ ಮಹಾದೇವಪ್ಪ
ಪ್ರಗತಿಪರ ರೈತರು ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿವಿಧ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳು,
ವಿಸ್ತರಣಾ ನಿರ್ದೇಶಕ ಡಾ. ರಾಘವೇಂದ್ರ ಕೆ. ಮೇಸ್ತ ವಂದಿಸಿದರು.


