ದೆಹಲಿ ಚಲೋ: ಕಾರ್ಯಕರ್ತರ ಬಗ್ಗೆ ಬಿ.ಕೆ. ಹರಿಪ್ರಸಾದ್ ಕಾಳಜಿಗೆ ಆರ್. ಮೋಹನ್ ಮೆಚ್ಚುಗೆ

ದೆಹಲಿ ಚಲೋ: ಕಾರ್ಯಕರ್ತರ ಬಗ್ಗೆ ಬಿ.ಕೆ. ಹರಿಪ್ರಸಾದ್ ಕಾಳಜಿಗೆ ಆರ್. ಮೋಹನ್ ಮೆಚ್ಚುಗೆ

ಶಿವಮೊಗ್ಗ: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ದೆಹಲಿ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇವರೆಲ್ಲರಿಗೂ ಸುವ್ಯವಸ್ಥಿತವಾದ ಪ್ರಯಾಣ, ಊಟ, ತಿಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದ್ದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಕಾರ್ಯ, ಪರಿಶ್ರಮ, ಕಾರ್ಯಕರ್ತರ ಬಗೆಗಿನ ಕಾಳಜಿಗೆ ಕೆಪಿಸಿಸಿ ಸಂಯೋಜಕ, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾರ್ಯಕರ್ತರ ಬಗ್ಗೆ ಕಾಳಜಿ ವಹಿಸುವುದು ಯಾವುದೇ ಒಂದು ಸಂಸ್ಥೆ, ಪಕ್ಷ ಅಥವಾ ಸಂಘಟನೆಯ ಯಶಸ್ಸಿನ ಮೂಲಾಧಾರವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವ ಕಾರ್ಯಕರ್ತರನ್ನು ಗೌರವದಿಂದ ಕಾಣುವುದು ಮತ್ತು ಅವರ ಅಗತ್ಯಗಳಿಗೆ ಸ್ಪಂದಿಸುವುದು ನಾಯಕತ್ವದ ಪ್ರಮುಖ ಜವಾಬ್ದಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿರುವ, ಕಾರ್ಯಕರ್ತರನ್ನು ಗೌರವಿಸುವಂತಹ ಸಹೃದಯಿ ನಾಯಕರಾಗಿದ್ದಾರೆ.

ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ, ಅವರ ಸಮಸ್ಯೆಗಳನ್ನು ಆಲಿಸುವುದು ಮತ್ತು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದು, ಕಾರ್ಯಕರ್ತರು ವೈಯಕ್ತಿಕ ಅಥವಾ ಆರ್ಥಿಕ ಸಂಕಷ್ಟದಲ್ಲಿದ್ದಾಗ ಪಕ್ಷ ಅಥವಾ ನಾಯಕರು ಅವರ ಬೆಂಬಲಕ್ಕೆ ನಿಲ್ಲುವುದು, ಕಾರ್ಯಕರ್ತರ ನಿಸ್ವಾರ್ಥ ಸೇವೆ ಮತ್ತು ಕಠಿಣ ಶ್ರಮವನ್ನು ಗುರುತಿಸಿ, ಸಾರ್ವಜನಿಕವಾಗಿ ಅಥವಾ ವೇದಿಕೆಗಳ ಮೇಲೆ ಅವರಿಗೆ ಸೂಕ್ತ ಗೌರವ ಮತ್ತು ಪ್ರಶಂಸೆ ನೀಡುವುದು, ಕಾರ್ಯಕರ್ತರಿಗೆ ತರಬೇತಿ ನೀಡಿ, ಅವರ ಕೌಶಲ್ಯಗಳನ್ನು ಹೆಚ್ಚಿಸುವ ಮೂಲಕ ಮುಂದಿನ ದಿನಗಳಲ್ಲಿ ಅವರು ನಾಯಕರಾಗಿ ಬೆಳೆಯಲು ಪ್ರೋತ್ಸಾಹಿಸುವಂತಹ ಕಾರ್ಯವನ್ನು ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ.

ಇದರಿಂದಾಗಿ ಇವರ ಮುಂದಾಳತ್ವ ಮತ್ತು ಸಮರ್ಥ ನಾಯಕತ್ವದಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸಾಕಷ್ಟು ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ್ ಹಾಗೂ ರಾಜ್ಯದ ಯಶಸ್ವಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮುಂದಿನ 2028 ಮತ್ತು 2029ರ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲೂ ಸಹ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಆರ್. ಮೋಹನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.