*ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ದಿಟ್ಟ ಹೆಜ್ಜೆ…* *ದೀಪಾವಳಿ ಒಳಗೆ ಖಾಸಗಿ ಆಸ್ಪತ್ರೆಯೊಳಗೇ ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡಲು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸೂಚನೆ* *ಶಿವಮೊಗ್ಗದ ಪಾರ್ಕ್ ಬಡಾವಣೆ, ದುರ್ಗಿಗುಡಿ ಪ್ರದೇಶಗಳಲ್ಲಿರೋ ಖಾಸಗಿ ಆಸ್ಪತ್ರೆಗಳ ಮುಂದೆ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕಾಗಿ ಸಭೆ*

*ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ದಿಟ್ಟ ಹೆಜ್ಜೆ…*

*ದೀಪಾವಳಿ ಒಳಗೆ ಖಾಸಗಿ ಆಸ್ಪತ್ರೆಯೊಳಗೇ ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡಲು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸೂಚನೆ*

*ಶಿವಮೊಗ್ಗದ ಪಾರ್ಕ್ ಬಡಾವಣೆ, ದುರ್ಗಿಗುಡಿ ಪ್ರದೇಶಗಳಲ್ಲಿರೋ ಖಾಸಗಿ ಆಸ್ಪತ್ರೆಗಳ ಮುಂದೆ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕಾಗಿ ಸಭೆ*

ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ಮಂಗಳವಾರದಂದು ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಪ್ರದೇಶಗಳ ರಸ್ತೆಗಳಲ್ಲಿ ಪ್ರತಿದಿನ ಉಂಟಾಗುತ್ತಿರುವ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ದೇವರಾಜ್ ವಿಶೇಷ ಸಭೆಯೊಂದನ್ನು ಕರೆದಿದ್ದು, ದೀಪಾವಳಿಯೊಳಗೆ ಖಾಸಗಿ ಆಸ್ಪತ್ರೆಗಳ ಸೆಲ್ಲರ್ ಬಲ್ಲಿಯೇ ಬರುವ ಸಾರ್ವಜನಿಕ ವಾಹನಗಳಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಸೂಚನೆ ನೀಡಿದರು.

ಅಲ್ಲದೆ, ಸಂಚಾರ ಗಸ್ತಿನ ಸಂದರ್ಭದಲ್ಲಿ ಸದರಿ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತಿರುವುದು ಕಂಡುಬಂದಿರುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಿದರು.

ಈ ಸಮಸ್ಯೆಯನ್ನು ನಿಯಂತ್ರಿಸಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯನ್ನು ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳ ಸಮ್ಮುಖದಲ್ಲಿ ಕರೆಯಲಾಗಿತ್ತು.

ಸಭೆಯಲ್ಲಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ತಮ್ಮ ತಮ್ಮ ಆಸ್ಪತ್ರೆಗಳಿಗೆ ಆಗಮಿಸುವ ವಾಹನಗಳ ನಿಲುಗಡೆಗಾಗಿ ಆಸ್ಪತ್ರೆಯ ಆವರಣದಲ್ಲಿಯೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಯಿತು. ಅಲ್ಲದೆ, ಆಸ್ಪತ್ರೆ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಪಾರ್ಕಿಂಗ್ ಉದ್ದೇಶಕ್ಕಾಗಿ ಮೀಸಲಿರಿಸಿರುವ ಸ್ಥಳವನ್ನು ಕಡ್ಡಾಯವಾಗಿ ವಾಹನಗಳ ನಿಲುಗಡೆಗೆ ಮಾತ್ರ ಬಳಸಬೇಕು ಹಾಗೂ ಸದರಿ ಸ್ಥಳವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಎಂದು ತಿಳಿಸಿದರು.

ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಸಹಕರಿಸುವಂತೆ ತಿಳಿಸಲಾಯಿತು.

ಸೂಚನೆಗಳನ್ನು ಉಲ್ಲಂಘಿಸುವ ಆಸ್ಪತ್ರೆಗಳ ಆಡಳಿತ ಮಂಡಳಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.