*⚠️ಸಾರ್ವಜನಿಕರ ಗಮನಕ್ಕೆ…* *ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ*
*⚠️ಸಾರ್ವಜನಿಕರ ಗಮನಕ್ಕೆ…*
*ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ*
ನನ್ನ ಹೆಸರು ಹಾಗೂ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ, ನನ್ನ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂದೇಶಗಳನ್ನು ಕಳುಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ನಕಲಿ ಖಾತೆಯ ಮೂಲಕ ಕೆಲವರ ಮೊಬೈಲ್ ಸಂಖ್ಯೆಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಕೇಳುತ್ತಿರುವುದು ತಿಳಿದುಬಂದಿದೆ ಎಂದಿದ್ದಾರೆ.
ನನ್ನ ಹೆಸರಿನಲ್ಲಿ ಬರುವ ಇಂತಹ ಯಾವುದೇ ಸಂದೇಶಗಳನ್ನು ನಂಬಬೇಡಿ. ಯಾರೊಂದಿಗೂ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬೇಡಿ. ಯಾವುದೇ ಹಣಕಾಸಿನ ವ್ಯವಹಾರ ನಡೆಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ವಂಚಿಸಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಹಾಗೂ ನನ್ನ ಸ್ನೇಹಿತರು, ಹಿತೈಷಿಗಳು ಇಂತಹ ನಕಲಿ ಖಾತೆಗಳಿಂದ ಎಚ್ಚರಿಕೆಯಿಂದಿರಬೇಕು. ಈ ಖಾತೆಯನ್ನು ಫೇಸ್ಬುಕ್ಗೆ ವರದಿ (Report) ಮಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.


