*ಎಸ್ಐಆರ್ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ*
*ಎಸ್ಐಆರ್ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಇಂದು ಶಿವಮೊಗ್ಗ ನಗರದ ಮಹಾವೀರ ವೃತ್ತದ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಸಿ. ಯೋಗೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಗಣ್ಯರು, ಮುಖಂಡರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಹಾವೀರ ವೃತ್ತದ ಸುತ್ತಮುತ್ತ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆಯ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.


