ಬೆಳಗಾವಿ KICM ಕಾಲೇಜಿಗೆ ಭೇಟಿ ನೀಡಿದ ಬಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳೊಂದಿಗೆ ಸಂವಾದ- ಪರಿಶೀಲನೆ

ಬೆಳಗಾವಿ KICM ಕಾಲೇಜಿಗೆ ಭೇಟಿ ನೀಡಿದ ಬಿ.ಕೆ.ಶಿವಕುಮಾರ್

ವಿದ್ಯಾರ್ಥಿಗಳೊಂದಿಗೆ ಸಂವಾದ- ಪರಿಶೀಲನೆ

ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಉಪಾಧ್ಯಕ್ಷರಾದ ಬಿ. ಕೆ. ಶಿವಕುಮಾರ್ ಅವರು ಬೆಳಗಾವಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (KICM) ಕಾಲೇಜಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳು, ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಕಾಲೇಜಿನ ಕಾರ್ಯನಿರ್ವಹಣೆ ಮತ್ತು ಅಲ್ಲಿನ ವ್ಯವಸ್ಥೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.

ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರಿಗೆ ಕಾಲೇಜಿನಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಶೈಕ್ಷಣಿಕ ವ್ಯವಸ್ಥೆಗಳು ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರಿಸಿದರು. ವಿದ್ಯಾರ್ಥಿಗಳ ಅನುಕೂಲ-ಅನಾನುಕೂಲಗಳನ್ನು ಆಲಿಸಿ, ಅವರ ಅಭಿಪ್ರಾಯಗಳು ಮತ್ತು ಸಲಹೆಗಳ ಬಗ್ಗೆ ಚರ್ಚೆ ನಡೆಸಿದರು.

ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಲೇಜಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.