ಶಿವಮೊಗ್ಗದಲ್ಲಿ ಸಂಚರಿಸುವ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಕೆ ಕಡ್ಡಾಯ – ಆರ್‌ಟಿಒ ಸೂಚನೆ ಮೀಟರ್ ಹಾಕದಿದ್ದರೆ 8277983404 ಈ ಸಹಾಯವಾಣಿ ನಂಬರ್ ಗೆ ಫೋನ್ ಮಾಡಿ

ಶಿವಮೊಗ್ಗದಲ್ಲಿ ಸಂಚರಿಸುವ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಕೆ ಕಡ್ಡಾಯ – ಆರ್‌ಟಿಒ ಸೂಚನೆ

ಮೀಟರ್ ಹಾಕದಿದ್ದರೆ 8277983404 ಈ ಸಹಾಯವಾಣಿ ನಂಬರ್ ಗೆ ಫೋನ್ ಮಾಡಿ

ಶಿವಮೊಗ್ಗ  ನಗರದಲ್ಲಿ ಸಂಚರಿಸುವ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಸದೇ, ಪ್ರಯಾಣಿಕರಿಂದ ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.

ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಯ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಎಲ್ಲಾ ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರು ಮುಂದಿನ 10 ದಿನಗಳೊಳಗಾಗಿ ಕಡ್ಡಾಯವಾಗಿ ಮೀಟರ್ ಅಳವಡಿಸಿಕೊಳ್ಳಬೇಕು ಮತ್ತು ಪ್ರಾಧಿಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೂರು ನೀಡಲು ಸಹಾಯವಾಣಿ:
ಆಟೋರಿಕ್ಷಾ ಚಾಲಕರು ಮೀಟರ್ ಪ್ರಕಾರ ಬಾಡಿಗೆ ಪಡೆಯದಿದ್ದಲ್ಲಿ ಅಥವಾ ಮೀಟರ್ ಹಾಕಲು ನಿರಾಕರಿಸಿದಲ್ಲಿ, ಸಾರ್ವಜನಿಕರು ತಕ್ಷಣವೇ ದೂರು ಸಲ್ಲಿಸಲು ಮೊಬೈಲ್ ಸಂಖ್ಯೆ: 8277983404 ಅನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.