ಮಕ್ಕಳ ಕ್ರೀಡಾ ಪ್ರತಿಭೆಗೆ ಪ್ರೋತ್ಸಾಹ ನೀಡಿದ ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್  IPS ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ  400ಕ್ಕೂ ಹೆಚ್ಚು ಮಕ್ಕಳಿಗೆ ಸ್ಫೂರ್ತಿದಾಯಕ ಸಂದೇಶ

ಮಕ್ಕಳ ಕ್ರೀಡಾ ಪ್ರತಿಭೆಗೆ ಪ್ರೋತ್ಸಾಹ ನೀಡಿದ ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್  IPS

ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ 

400ಕ್ಕೂ ಹೆಚ್ಚು ಮಕ್ಕಳಿಗೆ ಸ್ಫೂರ್ತಿದಾಯಕ ಸಂದೇಶ

ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ  ನಿಖಿಲ್ IPS  ಅದ್ಧೂರಿಯಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸುಮಾರು 400 ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಮಕ್ಕಳು ಕೇವಲ ಓದು-ಬರಹಕ್ಕೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕ್ರೀಡೆಯಿಂದ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದೊಂದಿಗೆ ಬೆರೆತು ಕೆಲಸ ಮಾಡುವ ಮನೋಭಾವ ಬೆಳೆಯುತ್ತದೆ. ಗೆಲುವು ಸಾಧಿಸಿದಾಗ ಅಹಂಕಾರ ಪಡದೆ, ಸೋಲು ಎದುರಾದಾಗ ನಿರಾಶರಾಗದೆ ಅದನ್ನು ಮುಂದಿನ ಗೆಲುವಿಗೆ ಮೆಟ್ಟಿಲನ್ನಾಗಿ ಮಾಡಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಪ್ರತಿಯೊಬ್ಬ ಮಗುವಿನಲ್ಲಿಯೂ ಒಂದೊಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರು ಮತ್ತು ದೇಶದ ಭವಿಷ್ಯದ ಶಕ್ತಿಯಾಗಿದ್ದಾರೆ. ಆದ್ದರಿಂದ ಮಕ್ಕಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಅತ್ಯಂತ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಸುಮಾರು 400 ಮಕ್ಕಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

ಮಕ್ಕಳ ಮುಖದಲ್ಲಿನ ಸಂತೋಷ, ಕ್ರೀಡಾ ಉತ್ಸಾಹ ಮತ್ತು ಸಾಧನೆಯ ಹಂಬಲ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಿ, ಕ್ರೀಡಾ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಬದಲಾವಣೆಗೆ ನಾಂದಿಯಾಗಲಿವೆ. ಉಪಸ್ಥಿತಿ:  ನಿಖಿಲ್ ಕುಮಾರ್ IPS,  ಕಾರ್ಯಪ್ಪ ASP ಮತ್ತು ಡಿವೈಎಸ್ಪಿ ಗಳಾದ  ಶೀಲವಂತ ,  ದಿಲೀಪ್, ಹಾಗೂ ಯುವರಾಜ್ ಇನ್ಸ್ಪೆಕ್ಟರ್ ಮತ್ತು ಅಧಿಕಾರಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು