*ರಾಜ್ಯ ಕನ್ನಡ ದೈವಜ್ಞ ಸಂಘದ 21ನೇ ವಾರ್ಷಿಕೋತ್ಸವ* *ನ.29ರಂದು ಸಮುದಾಯ ಭವನ ಕಟ್ಟಡದ ಶಿಲಾನ್ಯಾಸ ಸಮಾರಂಭ* ಸರ್ಕಾರ ಕಡಿಮೆ ಬಡ್ಡಿದರದಲ್ಲಿ ಸಾಲ, ಆರ್ಥಿಕ ಸಹಕಾರ ನೀಡಲು ಒತ್ತಾಯ

*ರಾಜ್ಯ ಕನ್ನಡ ದೈವಜ್ಞ ಸಂಘದ 21ನೇ ವಾರ್ಷಿಕೋತ್ಸವ*

*ನ.29ರಂದು ಸಮುದಾಯ ಭವನ ಕಟ್ಟಡದ ಶಿಲಾನ್ಯಾಸ ಸಮಾರಂಭ*

ಸರ್ಕಾರ ಕಡಿಮೆ ಬಡ್ಡಿದರದಲ್ಲಿ ಸಾಲ, ಆರ್ಥಿಕ ಸಹಕಾರ ನೀಡಲು ಒತ್ತಾಯ

*ರಾಜ್ಯ ಕನ್ನಡ ದೈವಜ್ಞ ಸಂಘದ 21ನೇ ವಾರ್ಷಿಕೋತ್ಸವ*

*ನ.29ರಂದು ಸಮುದಾಯ ಭವನ ಕಟ್ಟಡದ ಶಿಲಾನ್ಯಾಸ ಸಮಾರಂಭ*

ಗೌರವಾನ್ವಿತ ಮಾಧ್ಯಮ ಪ್ರತಿನಿಧಿಗಳೇ,

ನ.29 ರಂದು ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ 21ನೇ ವಾರ್ಷಿಕೋತ್ಸವ ಸಮಾ ಹಾಗೂ ನೂತನ ಸಮುದಾಯ ಭವನದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಕಾರ್ಯಕ್ರಮದ ಅಂಗವಾಗಿ ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಕಾರ್ಯಕ್ರಮದ ಪ್ರಮುಖ ಉದ್ದೇಶಗಳು ಹಾಗೂ ಮುಖ್ಯಾಂಶಗಳು:

1. ವಾರ್ಷಿಕ ಸರ್ವಸದಸ್ಯರ ಸಭೆ: ಸಹಕಾರಿ ಸಂಘಗಳ ನಿಯಮಾನುಸಾರ ನಡೆಯಲಿರುವ 21ನೇ ವಾಷಿ ಸರ್ವಸದಸ್ಯರ ಸಭೆಗೆ ಸಂಘದ ಆಜೀವ ಸದಸ್ಯರನ್ನು ಆಹ್ವಾನಿಸುವುದು.

2. ಪ್ರತಿಭಾ ಪುರಸ್ಕಾರ: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಅಂಕಗಳನ್ನು ಪಡೆದಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಸಲ್ಲಿಸುವಂತೆ ಮನವಿ ಮಾಡುವುದು.

3. ಧಾರ್ಮಿಕ ಕಾರ್ಯಕ್ರಮ: ಸಂಘದ 21ನೇ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಸತ್ಯನಾರಾಯಣ ಸಹ ಹಾಗೂ ಶ್ರೀ ಹಯಗ್ರೀವ ಸ್ವಾಮಿಯ ಪೂಜಾ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯ ಭಾಗವಹಿಸುವಂತೆ ಆಹ್ವಾನಿಸುವುದು.

4. ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದ ಕುರಿತು ಸಮಾಜ ಬಾಂಧವರಿಗೆ ಮಾಹಿತಿ ನೀಡುವುದು.

5. ದಾನಿಗಳಿಗೆ ಗೌರವ ಸಮರ್ಪಣೆ: 2025-26ನೇ ಸಾಲಿನಲ್ಲಿ ರಾಜ್ಯ ಸಂಘದ ಸಮುದಾಯ ಭವನ ನಿವ ಕಾರ್ಯಕ್ಕೆ ಆರ್ಥಿಕ ಸಹಾಯ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸುವುದು.

6. ನಿರ್ದೇಶಕ ಸ್ನಾನಕ್ಕೆ ಅರ್ಜಿ ಆಹ್ವಾನ: ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಸಕ್ರಿಯವಾಗಿ

ತೊಡಗಿಸಿಕೊಂಡು ಸಮಯ, ಶ್ರಮ ಹಾಗೂ ಧನವನ್ನು ವಿನಿಯೋಗಿಸಿ ಸಮಾಜ ಸೇವೆ ಮಾಡಲು ಆಸಕ್ತಿ ಹೊಂದಿರುವ ಸಮಾಜ ಬಾಂಧವರಿಂದ ನಿರ್ದೇಶಕ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸುವುದು.

7. ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರಿ ಅನುದಾನ: ಸಮುದಾಯ ಭವನ ನಿರ್ಮಾಣಕ್ಕಾಗಿ

ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗುವ ಪ್ರಸ್ತಾವನೆಯಿದ್ದು, ಈ ಅನುದಾನವನ್ನು ಸ್ವೀಕರಿಸುವುದರ ಜೊತೆಗೆ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದು.

8. ಚಿನ್ನದ ಕೆಲಸಗಾರರಿಗೆ ಆರ್ಥಿಕ ನೆರವು: 1968ರ ಗೋಲ್ಡ್ ಕಂಟ್ರೋಲ್ ಕಾಯ್ದೆಯಿಂದ

ಉದ್ಯೋಗಾವಕಾಶಗಳನ್ನು ಕಳೆದುಕೊಂಡಿರುವ ಹಾಗೂ ಪ್ರಸ್ತುತ ಗಗನಕ್ಕೇರುತ್ತಿರುವ ಚಿನ್ನದ ಬೆಲೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ, ಚಿನ್ನಾಭರಣ ತಯಾರಿಕೆಯನ್ನೇ ಕುಲಕಸುಬನ್ನಾಗಿ ಮಾಡಿಕೊಂಡಿರುವ ದೈವಜ್ಞ ಬ್ರಾಹ್ಮಣ ಸಮಾಜದ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ ವಿಶೇಷ ಆರ್ಥಿಕ ನೆರವು ಹಾಗೂ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಸಲ್ಲಿಸುವುದು.

9. ವಿದ್ಯಾರ್ಥಿಗಳಿಗಾಗಿ ವಸತಿ ವ್ಯವಸ್ಥೆ: ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ದೈವಜ್ಞ ಸಮಾಜದ

ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಶಿವಮೊಗ್ಗ ನಗರದ ಹೊರವಲಯದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ನಿರ್ಮಿಸಲು ನಿವೇಶನ ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದು.

10. ವಿಶೇಷ ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯ: 1968ರಲ್ಲಿ ಗೋಲ್ಡ್ ಕಂಟ್ರೋಲ್ ಕಾಯ್ದೆ

ಜಾರಿಯಾದ ಸಂದರ್ಭದಲ್ಲಿ ಉದ್ಯೋಗಾವಕಾಶಗಳಿಂದ ವಂಚಿತರಾದ ನಮ್ಮ ಸಮಾಜದ ಬಾಂಧವರಿಗೆ ಈ ಹಿಂದೆ ನೀಡಲಾಗಿದ್ದ ವಿಶೇಷ ಮೀಸಲಾತಿ ಸೌಲಭ್ಯವನ್ನು ಪುನಃ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದು, ಜೊತೆಗೆ ಸಮಾಜದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ವಿಶೇಷ ಮೀಸಲಾತಿ ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಸಲ್ಲಿಸುವುದು.