*ಪರಿಷ್ಕೃತ ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ*
*ಪರಿಷ್ಕೃತ ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ*
2026-27ನೇ ಸಾಲಿಗೆ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ತಾತ್ಕಾಲಿಕ ಪರಿಷ್ಕೃತ ದರಪಟ್ಟಿಯನ್ನು ನಗರದ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ನವೆಂಬರ್ 14ರಿಂದ ಈ ತಾತ್ಕಾಲಿಕ ದರಪಟ್ಟಿ ಕಚೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದನ್ನು ಪರಿಶೀಲಿಸಬಹುದಾಗಿದೆ. ಪರಿಷ್ಕೃತ ದರಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪಟ್ಟಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಒಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ಕಚೇರಿಯ ಕಾರ್ಯನಿರ್ವಹಣಾ ಅವಧಿಯಲ್ಲಿ ‘ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿ, ಮಳಿಗೆ ನಂ. 108 ಮತ್ತು 109, ಮೊದಲನೇ ಮಹಡಿ, ಎಪಿಎಂಸಿ ವಾಣಿಜ್ಯ ಸಂಕೀರ್ಣ, ಸಾಗರ ರಸ್ತೆ, ಶಿವಮೊಗ್ಗ’ ಇಲ್ಲಿಗೆ ಖುದ್ದಾಗಿ ಸಲ್ಲಿಸುವಂತೆ ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.


