*ಇಂದು 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ-2026 ಉದ್ಘಾಟನೆ*

*ಇಂದು 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ-2026 ಉದ್ಘಾಟನೆ*

ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಇವರ ವತಿಯಿಂದ ದಿನಾಂಕ 17-11-2026 ರಂದು 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ-2026ರ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಲಗಾನ್ ಕಲ್ಯಾಣಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಸಹಕಾರ ಸಚಿವರು ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ನೆರವೇರಿಸಲಿದ್ದಾರೆ.
ಸಹಕಾರ ಧ್ವಜಾರೋಹಣ: ಧ್ವಜಾರೋಹಣವನ್ನು ಮಾನ್ಯ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ.
ಪುಷ್ಪಾರ್ಚನೆ: ಸಹಕಾರಿ ಪಿತಾಮಹ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಪುಷ್ಪಾರ್ಚನೆ ಮಾಡಲಿದ್ದಾರೆ.
ಪ್ರಶಸ್ತಿ ಪ್ರದಾನ: ಉತ್ತಮ ಸಹಕಾರ ಸಂಘಗಳಿಗೆ ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರು ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರದ ಶಾಸಕರಾದ ಶ್ರೀ ಚನ್ನಬಸಪ್ಪ (ಚೆನ್ನಿ) ವಹಿಸಲಿದ್ದಾರೆ.
ಡಾ|| ಆರ್.ಎಂ. ಮಂಜುನಾಥಗೌಡ, ಅಧ್ಯಕ್ಷರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರು, ಬಿ.ಕೆ. ಶಿವಕುಮಾರ್, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು, ಶ್ರೀ ಹೆಚ್.ಎನ್. ವಿದ್ಯಾದರ್ ,ಅಧ್ಯಕ್ಷರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ, ಸಿ. ಹನುಮಂತಪ್ಪ ಅಗರದಹಳ್ಳಿ ಅಧ್ಯಕ್ಷರು, ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ ಹಾಗೂ ಜಿಲ್ಲೆಯ ಸಂಸದರು, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.