*ಬೇಳೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ* *ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ* *ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿಯವರಿಗೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಸ್ಥಾನ* *ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ: 18 ನಾಯಕರಿಗೆ ಪ್ರಮುಖ ಹುದ್ದೆ*

*ಬೇಳೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ*

*ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ*

*ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿಯವರಿಗೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಸ್ಥಾನ*

*ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ: 18 ನಾಯಕರಿಗೆ ಪ್ರಮುಖ ಹುದ್ದೆ*

ಕರ್ನಾಟಕ ಸರ್ಕಾರವು ನಿಗಮ, ಮಂಡಳಿಗಳಿಗೆ 428 ನಿರ್ದೇಶಕರು/ಸದಸ್ಯರನ್ನು ನೇಮಿಸಿದ ನಂತರ, ಕಾಂಗ್ರೆಸ್ ಹೈಕಮಾಂಡ್ ಇದೀಗ 18 ಪ್ರಮುಖ ನಾಯಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಮುಖ್ಯ ಸಚೇತಕರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳನ್ನು ಹಂಚಿಕೆ ಮಾಡಿದೆ. ತನ್ವೀರ್ ಸೇಠ್, ಬೇಲೂರು ಗೋಪಾಲಕೃಷ್ಣ ಸೇರಿದಂತೆ ಹಲವರಿಗೆ ಸ್ಥಾನ ಸಿಕ್ಕಿದ್ದು, ಅಸಮಾಧಾನ ಶಮನಗೊಳಿಸಲು ಮತ್ತು ಪ್ರಾದೇಶಿಕ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗಿದೆ.

ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ಬೆನ್ನಲ್ಲೆ ಇದೀಗ ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಅಧಿಕೃತ ಲೆಟರ್‌ಹೆಡ್‌ನಲ್ಲಿ ರಾಜ್ಯದ 18 ಪ್ರಮುಖ ನಾಯಕರ ಹೆಸರುಗಳನ್ನು ಉಲ್ಲೇಖಿಸಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಾದ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ, ಬೇಳೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಹಾಗೂ ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವ ಮೂಲಕ ಹೈಕಮಾಂಡ್ ಅಸಮಾಧಾನ ಶಮನಗೊಳಿಸಲು ಮುಂದಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಸಿ.ಎಸ್.ಷಡಾಕ್ಷರಿಯವರಿಗೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.