ಪೋಕ್ಸೋ ಪ್ರಕರಣ; ಅಪರೂಪಕ್ಕೆ ನಕ್ಕು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?!

*ಪೋಕ್ಸೋ ಪ್ರಕರಣ;*

*ಅಪರೂಪಕ್ಕೆ ನಕ್ಕು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?!*

ತಾಯಿ ಮಗಳು ತೊಂದರೆ ಇದೆ ಅಂತ ಕಣ್ಣೀರು ಹಾಕಿಕೊಂಡು ಬಂದಿದ್ರು. ಅವರಿಗೆ ಸಹಾಯ ಮಾಡಿದೀನಿ.ಆದರೆ, ಈ ರೀತಿ ದೂರು ನೀಡಿದ್ದಾರೆ. ತೊಂದರೆ ಇದೆ ಅಂದಿದ್ದಕ್ಕೆ ಹಣವನ್ನೂ ಕೊಟ್ಟು ಕಳಿಸಿದ್ದೆ ಎಂದು ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಹಲವೊಮ್ಮೆ ಬಂದು ಕಾಯುತ್ತಿದ್ದರು. ಒಮ್ಮೆ ಕಣ್ಣೀರು ಹಾಕುತ್ತಿದ್ದವರಿಗೆ ಮನೆಯೊಳಗೆ ಕರೆದೊಯ್ದೆ. ಸಮಸ್ಯೆ ಆಲಿಸಿ ಪೊಲೀಸ್ ಅಧಿಕಾರಿ ದಯಾನಂದ್ ರವರಿಗೆ ಫೋನ್ ಮಾಡಿ ಇವರ ಸಮಸ್ಯೆ ಬಗೆಹರಿಸಲು ಹೇಳಿದ್ದೆ. ಅಲ್ಲೇ, ನನ್ನ ವಿರುದ್ಧವೇ ಮಾತಾಡೋಕೆ ಶುರು ಮಾಡಿದ್ರು. ಪೊಲೀಸ್ ಕಮೀಷನರ್ ಹತ್ರ ಆಗಲೇ ಕಳಿಸಿಕೊಟ್ಟಿದ್ದೆ ಎಂದು ಹೇಳಿದರು.

ಪ್ರಕರಣ ದಾಖಲಾಗಿದೆ. ರಾಜಕಾರಣ ಯಾರೂ ಮಾಡ್ತಿಲ್ಲ. ಪ್ರಕರಣ ಎದುರಿಸುವೆ ಎಂದು ತಿಳಿಸಿದರು.

*ಬಾಲಕಿಗೆ ಲೈಂಗಿಕ ದೌರ್ಜನ್ಯ;*

*ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ಸಂಬಂಧ ಡಿಕೆಶಿ- ಡಾ.ಪರಮೇಶ್ವರ್ ಏನಂದ್ರು?*

ಇದೊಂದು ಸೂಕ್ಷ್ಮ ವಿಚಾರ. ನನಗೆ ವಿಚಾರ ಗೊತ್ತಾಯ್ತು ಅಷ್ಟೇ. ಹೆಚ್ಚಿಗೆ ಮಾಹಿತಿ ಇಲ್ಲ. ಪೋಕ್ಸೋ ಪ್ರಕರಣ ಕುರಿತು ಗೃಹ ಸಚಿವರೇ ಮಾತಾಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಕೈ ಬರಹದಲ್ಲಿ ದೂರು ಕೊಟ್ಟಿಲ್ಲ.ಟೈಪ್ ಮಾಡಿ ದೂರು ನೀಡಲಾಗಿದೆ. ಕೆಲವರ ಪ್ರಕಾರ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಥರ ಕಾಣಿಸುತ್ತಿದ್ದಾರೆ ಅಂತಾರೆ.

ದೂರು ಪರಿಶೀಲಿಸಿ ತನಿಖೆ ನಡೆಯಲಿದೆ. ಇದು ಮಾಜಿ ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣವೂ ಆಗಿರುವುದರಿಂದ ಸೂಕ್ಷ್ಮವಾಗಿಯೇ ತನಿಖಾಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

*ಬಾಲಕಿಗೆ ಲೈಂಗಿಕ ದೌರ್ಜನ್ಯ;*
*ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ!*

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಪೋಕ್ಸೋ ಪ್ರಕರಣದಲ್ಲಿ
ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಹೇಳಿರುವುದಾಗಿ ತಜ್ಞರು ಹೇಳುತ್ತಾರೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ.