ಕಾಂಗ್ರೆಸ್ ಗೆ ಈಗ ಐವರು ಕಾರ್ಯಾಧ್ಯಕ್ಷರು ಮಂಜುನಾಥ ಭಂಡಾರಿಯವರಿಗೂ ಜವಾಬ್ದಾರಿ 14 ಕ್ಷೇತ್ರಗಳಲ್ಲಿ ತಂತ್ರಗಾರಿಕೆ ರೂಪಿಸುತ್ತಿದೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನೂ ಒಳಗೊಂಡ ಸೈನ್ಯದಿಂದಲೇ ಯುದ್ಧ
ಕಾಂಗ್ರೆಸ್ ಗೆ ಈಗ ಐವರು ಕಾರ್ಯಾಧ್ಯಕ್ಷರು
ಮಂಜುನಾಥ ಭಂಡಾರಿಯವರಿಗೂ ಜವಾಬ್ದಾರಿ
14 ಕ್ಷೇತ್ರಗಳಲ್ಲಿ ತಂತ್ರಗಾರಿಕೆ ರೂಪಿಸುತ್ತಿದೆ ಕಾಂಗ್ರೆಸ್
ಜಿಲ್ಲಾಧ್ಯಕ್ಷರನ್ನೂ ಒಳಗೊಂಡ ಸೈನ್ಯದಿಂದಲೇ ಯುದ್ಧ
ಲೋಕಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಮತದಾನದ ದಿನಾಂಕವನ್ನು ಸಹ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಕಾವು ಜಾಸ್ತಿ ಆಗುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಐವರು ನೂತನ ಕಾರ್ಯಾಧ್ಯಕ್ಷರನ್ನು ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (ಎಐಸಿಸಿ) ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಯಾರೆಲ್ಲ ನೇಮಕ
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ.
ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ನೇಮಕ.
ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್.ಹನುಮಂತಯ್ಯ ನೇಮಕ.
ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ನೇಮಕ
ಸಿದ್ದರಾಮಯ್ಯ, ಶಿವಕುಮಾರ್ ನೇತೃತ್ವದಲ್ಲಿ ಸಭೆ: 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಚಂದ್ರಪ್ಪ, ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನಪರಿಷತ್ ಸದಸ್ಯರು.
ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಮಾಜಿ ಶಾಸಕರು, 14 ಕ್ಷೇತ್ರಗಳ ವ್ಯಾಪ್ತಿಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ ರೂಪಿಸಲಾಗಿದೆ ಎನ್ನಲಾಗುತ್ತಿದೆ.