ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ

ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್ಸಿಗರೂ ಸೂಡಾದ ಮಾಜಿ ಅಧ್ಯಕ್ಷರೂ ಆದ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರೂ  ಆಗಿರುವ  ಎನ್. ರಮೇಶ್ ನೇಮಕವಾಗಿದ್ದಾರೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪರವರಿಗೆ ನೇಮಕಗೊಂಡಿರುವ ರಮೇಶ್ ರವರು ಕೃತಜ್ಞತೆ ತಿಳಿಸಿದ್ದಾರೆ.