ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ; ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್
ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ;
ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್
ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿದ್ದಾರೆ ಎಂದು ದೂರಿದ್ದಾರೆ. ಇದು ಖಂಡನೀಯ. ರಾಜ್ಯದೆಲ್ಲೆಡೆ ಈ ಬಗ್ಗೆ ಹೋರಾಟ ಮಾಡಬೇಕು ಎಂದರು.
ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗಿದೆ. ಎಂದರು.
ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕನುಸುಗಳಿಗೆ ಜೀವ ತುಂಬಲು ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.