ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ *ಬಿ ವೈ ರಾಘವೇಂದ್ರ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇದ್ದರು.