ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ*

*ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ*

ಶಿವಮೊಗ್ಗ ಲೋಕಸಭಾ ಚುನಾವಣೆ-2024 ರ ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಏ.27 ರಂದು ಎನ್.ಇ.ಎಸ್ ಮೈದಾನದಲ್ಲಿ ಟೆನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

12 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,
ಸದರಿ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರವರು ಬೆಳಿಗ್ಗೆ 8.00 ಗಂಟೆಗೆ ಉದ್ಘಾಟನೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಕ್ರೀಡಾ ಪಟುಗಳಿಗೆ ಪ್ರೊತ್ಸಾಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ನೇಹಲ್ ಸುಧಾಕರ ಲೋಖಂಡೆ ಅವರು ಕೋರಿದ್ದಾರೆ.