ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:
ಉಡುಪಿ ಜಿಲ್ಲೆಗೆ ಮೊದಲ ಸ್ಥಾನ
ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: ಕೊನೆಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ಆ ದಿನ ಬಂದೇಬಿಟ್ಟಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಎಷ್ಟು ಮಂದಿ ತೇರ್ಗಡೆಯಾದರು? ತೇರ್ಗಡೆ ಪ್ರಮಾಣ ಎಷ್ಟಿದೆ? ಯಾವ ಜಿಲ್ಲೆ ಅಗ್ರಹ ಸ್ಥಾನದಲ್ಲಿದೆ? ಇತ್ಯಾದಿ ಎಲ್ಲ ಮಾಹಿತಿ ಇಲ್ಲಿದೆ.
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.
ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತ ಬಸಪ್ಪಳಿಗೆ 625 ಅಂಕ
ಮೇದಾ ಪಿ ಶೆಟ್ಟಿ ಬೆಂಗಳೂರು ಗೆ 624
ಹರ್ಷಿತ ಎಂ ಮಧು ಗಿರಿಗೆ 624
ಈ ಬಾರಿಯೂ ಬಾಲಕಿಯರದೇ ಮೇಲು ಗೈ