ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ; ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ; ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ

ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ;

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ;

ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ

ಖಾಸಗಿ ಶಿಕ್ಷಣ ಸಂಸ್ಥೆಗಳ ಹಗಲು ದರೋಡೆ ನಿಲ್ಲಿಸಿ ಪೋಷಕರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಡೊನೇಷನ್, ಫೀಸ್ ಹಾವಳಿ ವಿಪರೀತವಾಗಿದೆ. ಸರ್ಕಾರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಈ ಹಾವಳಿ ತಪ್ಪಿಸಬೇಕು ಎಂದರು.

ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕವನ್ನು ಮಿತಿಮೀರಿ ಪಡೆಯುತ್ತಿವೆ. ಕೂಡಲೇ ಶಿಕ್ಷಣ ಮಂತ್ರಿಗಳು ಮತ್ತು ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಆಮ್ ಆದ್ಮಿ ಪಾರ್ಟಿ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದರು.