ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿರುವ ಎಸ್.ಪಿ.ದಿನೇಶ್*
*ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿರುವ ಎಸ್.ಪಿ.ದಿನೇಶ್*
ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿರುವ ಎಸ್.ಪಿ.ದಿನೇಶ್ ರವರು ಮೇ.15 ರ ನಾಳೆ ಬೆಳಿಗ್ಗೆ 11ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಎಸ್.ಪಿ.ದಿನೇಶ್ ರವರು ಈ ಹಿಂದೆ ಅಂದರೆ, 2012 ಮತ್ತು 2018 ರಲ್ಲಿ ನಡೆದ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು.
ಈ ಬಾರಿಯೂ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದ ದಿನೇಶ್ ರವರಿಗೆ ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದ್ದಲ್ಲದೇ ಆ ಟಿಕೇಟನ್ನು ವಲಸೆ ಬಂದ ಆಯನೂರು ಮಂಜುನಾಥ್ ರವರಿಗೆ ಕಾಂಗ್ರೆಸ್ ಪಕ್ಷ ನೀಡಿದ್ದರಿಂದ ಬೇಸರಗೊಂಡಿದ್ದರು. ಈಗವರು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ.