ತವರು ನೆಲದಲ್ಲಿ ಆರ್ ಸಿ ಬಿ ಗೆದ್ದಿದ್ದೆಷ್ಟು? ಚೆನ್ನೈ ಸೋತಿದ್ದೆಷ್ಟು?
ತವರು ನೆಲದಲ್ಲಿ ಆರ್ ಸಿ ಬಿ ಗೆದ್ದಿದ್ದೆಷ್ಟು? ಚೆನೈ ಸೋತಿದ್ದೆಷ್ಟು?
ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿಗಿಂತ ಸಿಎಸ್‌ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..
ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿಗಿಂತ ಸಿಎಸ್‌ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.
ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.
ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.
ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.