ನೈರುತ್ಯ ಪದವೀಧರ/ ಶಿಕ್ಷಕ ಕ್ಷೇತ್ರ ಗೆಲ್ಲಿಸೋದೇ ನಮ್ ಗುರಿ; ಎಂ.ರಮೇಶ್ ಶಂಕರಘಟ್ಟ

ನೈರುತ್ಯ ಪದವೀಧರ/ ಶಿಕ್ಷಕ ಕ್ಷೇತ್ರ ಗೆಲ್ಲಿಸೋದೇ ನಮ್ ಗುರಿ; ಎಂ.ರಮೇಶ್ ಶಂಕರಘಟ್ಟ
 ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಬೇಕು ಎಂದು ಉಸ್ತುವಾರಿ ಎಂ. ರಮೇಶ್ ಶೆಟ್ಟಿ ಶಂಕರಘಟ್ಟ ಹೇಳಿದರು.
ಅವರು ಇಂದು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ. ಮಂಜುನಾಥ್ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದಾರೆ. ಈ ಇಬ್ಬರು ಕೂಡ ಕ್ರಿಯಾಶೀಲ ವ್ಯಕ್ತಿಗಳಾಗಿದ್ದಾರೆ. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಈ ಇಬ್ಬರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲು ಬಯಸಿ ನಾಮಪತ್ರ ಸಲ್ಲಿಸಿದ್ದೆ. ೨೦೧೮ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ ೩೨೭ ಮತಗಳ ಅಂತರದಿಂದ ಸೋತಿದ್ದೆ. ಮತ್ತು ಅಲ್ಲಿಂದ ಶಿಕ್ಷಕರ ನೊಂದಣಿಯನ್ನು ಮಾಡಿಸುತ್ತ ಬಂದಿದ್ದೆ ಹಾಗಾಗಿ ಸ್ಪರ್ಧೆ ಮಾಡಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಚಿವ ಮಧುಬಂಗಾರಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ನಾಯಕರ ಮನವಿಯ ಮೆರೆಗೆ ನನ್ನ ನಾಮಪತ್ರವನ್ನು ವಾಪಾಸ್ಸು ತೆಗೆದುಕೊಂಡಿದ್ದೇನೆ ಎಂದರು.
ಈಗ ಎರಡು ಕ್ಷೇತ್ರದ ಉಸ್ತುವಾರಿಯಾಗಿ ನನ್ನನ್ನು ನೇಮಕ ಮಾಡಿದ್ದಾರೆ. ಈಗಾಗಲೇ ಈ ಇಬ್ಬರ ಪರವಾಗಿ ನಾನು ಪ್ರಚಾರ ಮಾಡುತ್ತಿದ್ದೇನೆ. ಈ ಇಬ್ಬರು ಕೂಡ ಗೆಲ್ಲಬೇಕಾಗಿದೆ ಎಂದರು.
ಆಯನೂರು ಮಂಜುನಾಥ್ ಅವರು ಆಡಳಿತದ ಪಕ್ಷದಲ್ಲಿದ್ದರು ಕೂಡ ಕಳೆದಬಾರಿ ಪದವೀಧರರ ಮತ್ತು ಸರ್ಕಾರಿ ನೌಕರರ ಕಾರ್ಮಿಕರ ಪರವಾಗಿ ಧ್ವನಿಯೆತ್ತಿದವರು ಸಭಾ ತ್ಯಾಗವನ್ನು ಮಾಡಿದವರು ಮುಖ್ಯವಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗಾಗಿ ಶ್ರಮಿಸುತ್ತಿದ್ದಾರೆ. ಹಾಗೆಯೇ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಕೆ. ಮಂಜುನಾಥ್‌ರವರಿಗೂ ಕೂಡ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಜೊತೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ನೌಕರರ ಸಮಸ್ಯೆ ಹರಿಯಲಿದೆ. ಈ ದೃಷ್ಟಿಯಿಂದಲೂ ಕೂಡ ಈ ಇಬ್ಬರನ್ನು ಗೆಲ್ಲಿಸಬೇಕು ಎಂದರು.
ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಂಗಸ್ವಾಮಿ ಮಾತನಾಡಿ, ನಾನು ಕೂಡ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಯಾಗಿದ್ದೆ ಆದರೆ ಎಲ್ಲಾ ಹಿರಿಯರ ಮತ್ತು ನಾಯಕರ ಮಾತಿಗೆ ಬೆಲೆಕೊಟ್ಟು ನಾಮಪತ್ರ ವಾಪಾಸ್ಸು ಪಡೆದು ಇದೀಗ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ. ಅವರ ಗೆಲುವು ಖಚಿತ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಆಯನೂರು ಮಂಜುನಾಥ್, ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್, ಮುಖಂಡರಾದ ಎಂ.ಶ್ರೀಕಾಂತ್, ಶಾಂತವೀರ ನಾಯಕ್, ಇಕ್ಕೇರಿ ರಮೇಶ್, ಜಿ.ಪದ್ಮನಾಭ್, ಶಿ.ಜು.ಪಾಶ, ಜಿ.ಡಿ.ಮಂಜುನಾಥ್,ಚಾಮರಾಜ್ ಮುಂತಾದವರು ಇದ್ದರು.