ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್.ಪಿ.ದಿನೇಶ್ ಸೇರಿದಂತೆ ಒಟ್ಟು ಐದು ಜನರನ್ನು ಕೂಡಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ.ಹಾಗಾಗಿ, ಪ್ರಾಥಮಿಕ ಸದಸ್ಯತ್ವದಿಂದ ಐದು ಜನರನ್ನು ಅಮಾನತು ಮಾಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗದ ಎಸ್ ಪಿ ದಿನೇಶ್, ಬೆಂಗಳೂರಿನ ಫರ್ಡಿನಾಂಡ್ ಲಾರೆನ್ಸ್, ಚಿಕ್ಕಮಗಳೂರಿನ ಬಿ ಆರ್ ನಂಜೇಶ್, ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅಮಾನತಿಗೊಳಗಾದವರು.
ಇವರೆಲ್ಲ ಕಾಂಗ್ರೆಸ್ ಪಕ್ಷದ ಪದವೀಧರ ಕ್ಷೇತ್ರ/ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದಾರೆ.