ಕಾಂಗ್ರೆಸ್ ಕೃತಜ್ಞತಾ ಸಭೆ ನಾಳೆ
ಕಾಂಗ್ರೆಸ್ ಕೃತಜ್ಞತಾ ಸಭೆ ನಾಳೆ
ಜೂ.10ರ ಸೋಮವಾರ ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ನಗರದ ಹೆಲಿಪ್ಯಾಡ್ ಪಕ್ಕದಲ್ಲಿರುವ ಜಿಲ್ಲಾ ಆರ್ಯ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ಶ್ರೀಮತಿ ಗೀತಾ ಶಿವರಾಜಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಶಾಸಕರಾದ ಬಿ ಕೆ ಸಂಗಮೇಶ್, ಬೇಳೂರು ಗೋಪಾಲಕೃಷ್ಣ, ಶ್ರೀಮತಿ ಬಲ್ಕಿಶ್ ಬಾನು ಹಾಗು ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ವಹಿಸಲಿದ್ದಾರೆ. ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ.