ಇಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ!*

*ಇಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ!*

ನರೇಂದ್ರ ಮೋದಿಯವರು ಇಂದು (ಜೂ.09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಹೆಚ್​​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಸಂಸದ ಡಾ. ಮಂಜುನಾಥ್​ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha Constituency) ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ, ಸಂಸದ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಬಿಜೆಪಿ ನೂತನ ಸಂಸದ ಡಾ.ಮಂಜುನಾಥ್ (Dr. Manjunath) ಹೇಳಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆ​ಚ್​.ಡಿ. ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದರು.

ಕುಮಾರಣ್ಣ ಮಂತ್ರಿ ಆಗುತ್ತಿರುವುದು ಖುಷಿ ಕೊಡುತ್ತಿದೆ: ಕಾಶಪ್ಪನವರ್

ಕೇಂದ್ರ ಸರ್ಕಾರದಲ್ಲಿ ಕುಮಾರಣ್ಣ ಮಂತ್ರಿ ಆಗುತ್ತಿರುವುದು ಬಹಳ ಖುಷಿ ಕೊಡುತ್ತಿದೆ. ಕರ್ನಾಟಕ ಜನತೆ ತುಂಬಾ ಖುಷಿ ಪಡುತ್ತಾರೆ. ಅಭಿವೃದ್ದಿ ದೃಷ್ಟಿಯಿಂದ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಜೆಡಿಎಸ್ ಭಾಗಿಯಾಗುತ್ತಿರುವುದು ಐತಿಹಾಸಿಕ. ಕಾಂಗ್ರೆಸ್​ನವರು ದೋಖಾ ಮಾಡಿ ಸರ್ಕಾರ ಮಾಡಿದ್ದಾರೆ. ಸರ್ಕಾರ ವಿಸರ್ಜನೆ ಮಾಡಿ ಬರುತ್ತಾರಾ ಅವರು. ಕಾಂಗ್ರೆಸ್ ಜನರಿಗೆ ಸುಳ್ಳು ಹೇಳಿ, ಗಿಮಕ್‌ ಮಾಡಿ ಸರ್ಕಾರ ಮಾಡಿದ್ದಾರೆ ಎಂದು ಮಾಜಿ ಸಚಿವ ಬಂಡಪ್ಪ ಕಾಶಪ್ಪನವರ್ ಹೇಳಿದರು.

ಸಂಸದ ಹೆಚ್​ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಹೆಚ್​.ಡಿ ಕುಮಾರಸ್ವಾಮಿ ಅವರು ಇದಕ್ಕೂ ಮುನ್ನ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗುತ್ತಿದ್ದಾರೆ.
ಹೆಚ್​ಡಿ ಕುಮಾರಸ್ವಾಮಿ ಅವರು ಈಗಾಗಲೆ ದೆಹಲಿಯಲ್ಲಿದ್ದು, ಇಂದು ಸಂಜೆ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇರುವುದರಿಂದಲೇ ಕುಮಾರಸ್ವಾಮಿ ಪತ್ನಿ ಅನಿತಾ, ಪುತ್ರ ನಿಖಿಲ್, ಸೊಸೆ ರೇವತಿ ದೆಹಲಿಗೆ ತೆರಳಿದ್ದಾರೆ.
ಇನ್ನು, ಕೇಂದ್ರ ಸರ್ಕಾರದಲ್ಲಿ ರಾಜ್ಯದ 3 ರಿಂದ 4 ಜನರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.  ಪ್ರಹ್ಲಾದ್​ ಜೋಶಿ,  ಬಸವರಾಜ ಬೊಮ್ಮಾಯಿ, ಜಗದೀಶ್​ ಶೆಟ್ಟರ್​, ಗೋವಿಂದ ಕಾರಜೋಳ ಅಥವಾ ರಮೇಶ್​ ಜಿಗಜಿಣಗಿ ಅವರು ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.