ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್…

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ
ಎಂ.ಶ್ರೀಕಾಂತ್…

ಶಿವಮೊಗ್ಗ ಡಿಸಿಸಿ ಬ್ಯಾಂಕಿನ 13 ಜನ ನಿರ್ದೇಶಕರ ಸ್ಥಾನಕ್ಕೆ ಜೂನ್ 28 ರಂದು ಚುನಾವಣೆ ನಡೆಯಲಿದ್ದು, ಇಂದು ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರು ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.

ಜೂ. 12 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಶ್ರೀಕಾಂತ್ ನಾಮಪತ್ರ ಸಲ್ಲಿಸಿದರು. ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ.

ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ-1 ರಿಂದ ಎಂ.ಶ್ರೀಕಾಂತ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿದ್ದಾರೆ.

ಜೂನ್ 28 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ಶಿವಮೊಗ್ಗದ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಈ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ.