ಪೋಕ್ಸೋ ಪ್ರಕರಣ; ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ 20 ವರ್ಷದ ಕಠಿಣ ಜೈಲು*
*ಪೋಕ್ಸೋ ಪ್ರಕರಣ; ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ 20 ವರ್ಷದ ಕಠಿಣ ಜೈಲು*
2023ರಲ್ಲಿ *ಶಿಕಾರಿಪುರ ತಾಲ್ಲೂಕಿನ ವಾಸಿ 23 ವರ್ಷದ ಯುವಕ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣದಲ್ಲಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ., ದಂಡ ವಿಧಿಸಿ ಆದೇಶಿಸಿದೆ.
ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ 376(2)(f), 376(2)(n)) ಐಪಿಸಿ ಕಾಯ್ದೆ ಮತ್ತು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಎಸ್.ಸಿ ಮತ್ತು ಎಸ್.ಟಿ ಪಿಎ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಶಿವಾನಂದ ಎಸ್ ಮದರಖಂಡಿ,ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ ರವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಎಸ್. ಹರಿಪ್ರಸಾದ್, ಸರ್ಕಾರಿ ಅಭಿಯೋಜಕರವರು, ವಾದ ಮಂಡಿಸಿದ್ದು, *ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1* ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ *ಶ್ರೀಮತಿ ಲತಾ* ರವರು ಜೂ.20 ರಂದು ಪ್ರಕರಣದ *ಆರೋಪಿ ಶಿಕಾರಿಪುರ ತಾಲ್ಲೂಕಿನ ವಾಸಿ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ* ವಿಧಿಸಿದ್ದು, ನೊಂದ ಬಾಲಕಿಗೆ *ಪರಿಹಾರವಾಗಿ ದಂಡದ ಮೊತ್ತದಲ್ಲಿ 45,000/- ಮತ್ತು ಸರ್ಕಾರದ ವತಿಯಿಂದ ರೂ 7,00,000/-* ನೀಡುವಂತೆ ಆದೇಶಿಸಿದ್ದಾರೆ.