ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ
ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ;
ಬಂಧಿಸಿದ 6 ಜನರಿಂದ 11,250₹ ವಶ
ಭಾನುವಾರದಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನವಿಲೆ ಗ್ರಾಮದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹೀರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಜೂಜಾಟಕ್ಕೆ ಕಟ್ಟಿದ್ದ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ , ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಸುರೇಶ್ .ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಸತ್ಯನಾರಾಯಣ, ಪಿ.ಐ. ಮತ್ತು ವಗ್ಗಣ್ಣನವರ್ ಪಿ.ಎಸ್.ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿನಡೆಸಿ, ಇಸ್ಪೀಟು ಜೂಜಾಟ ಆಡುತ್ತಿದ್ದ 6 ಜನರನ್ನು ದಸ್ತಗಿರಿ ಮಾಡಿ, ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 11,250/- ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0204/2024 ಕಲಂ 87 ಕೆ ಪಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿರುತ್ತದೆ.